ಕ್ರೈಂವೈರಲ್ ನ್ಯೂಸ್

ಹಿಂದೂ ಯುವಕನ ಜೊತೆ ಬೈಕ್ ನಲ್ಲಿ ಬಂದ ಮುಸ್ಲಿಂ ಯುವತಿ! ಯುವಕರ ಗುಂಪಿನಿಂದ ದಾಳಿ! ಮುಂದೇನಾಯ್ತು..?

39
Spread the love

ನ್ಯೂಸ್ ನಾಟೌಟ್ : ಅನೈತಿಕ ಪೊಲೀಸ್‌ಗಿರಿ ಪ್ರಕರಣ ಹಾನಗಲ್‌ ತಾಲ್ಲೂಕಿನ ನಾಲ್ಕರ ಕ್ರಾಸ್‌ ಬಳಿ ಘಟನೆ ನಡೆದಿದ್ದು, ಬ್ಯಾಡಗಿ ತಾಲ್ಲೂಕಿನ ಅಗಸನಹಳ್ಳಿಗೆ ಹಬ್ಬಕ್ಕಾಗಿ ತನ್ನ ಜೊತೆ ಕೆಲಸ ಮಾಡುತ್ತಿದ್ದ ಹಿಂದೂ ಯುವಕನ ಜೊತೆ ಮುಸ್ಲಿಂ ಯುವತಿ ಬೈಕ್‌ನಲ್ಲಿ ತೆರಳಿದ್ದರು ಎನ್ನಲಾಗಿದೆ.

ಈ ವೇಳೆ ಮಾರ್ಗ ಮಧ್ಯೆ ಮಾತನಾಡುತ್ತಾ ನಿಂತಿದ್ದ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಮುಸ್ಲಿಂ ಯುವಕರ ಗುಂಪು, ಹಿಂದೂ ಯುವಕನ ಜೊತೆ ಬಂದಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳಕ್ಕೆ ಹೊಡೆದು ಎಳೆದಾಡಿ ನಿಂದಿಸಿದ್ದಾರೆ’ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.
‘ಘಟನೆಗೆ ಸಂಬಂಧಿಸಿದಂತೆ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, 7 ಆರೋಪಿಗಳನ್ನು ಬಂಧಿಸಿದ್ದು, ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

https://newsnotout.com/2024/01/wife-husband-issue-love-track/
See also  ಪಂಜ: 4 ದಿನದಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಹೊಳೆಯಲ್ಲಿ ಪತ್ತೆ..! ಸುಳ್ಯದ ಯುವಕರಿಂದ ಕಾರ್ಯಾಚರಣೆ..!
  Ad Widget   Ad Widget   Ad Widget