ಕ್ರೈಂವೈರಲ್ ನ್ಯೂಸ್

“ನೀನು ಮುಸ್ಲಿಂ ಇದಿಯಲ್ವ.. ಬುರ್ಖಾ ಧರಿಸಿ ಬಾ.. ಆಗ ಮಾತ್ರ ಬಸ್ ಹತ್ತಲು ಬಿಡ್ತೇನೆ”.. ! ಮುಸ್ಲಿಂ ವಿದ್ಯಾರ್ಥಿನಿಯರನ್ನ ತಡೆದ ಡ್ರೈವರ್ ಅಮಾನತು!

54
Spread the love

ನ್ಯೂಸ್ ನಾಟೌಟ್: ಬುರ್ಖಾ ಧರಿಸದಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರನ್ನ ಬಸ್ ಹತ್ತಲು ಬಿಡದ ಕೆಎಸ್ಆರ್ ಟಿಸಿ ಬಸ್‌ ಚಾಲಕನನ್ನ ಅಮಾನತುಗೊಳಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಹಿಜಬ್‌ಧಾರಿ ಶಾಲಾ‌ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಬಸ್ ಚಾಲಕನನ್ನ ಅಮಾನತುಗೊಳಿಸಲಾಗಿದೆ ಎಂದು ಇಲಾಖೆ ಹೇಳಿಕೊಂಡಿದೆ. ಕಲಬುರಗಿ ಬಸ್ ಡಿಪೋ-3 ರ ಚಾಲಕ ಮೆಹಬೂಬ್ ಪಟೇಲ್ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೇ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ KKRTC ಕಲಬುರಗಿ ವಿಭಾಗದ ಡಿಸಿ ಚಾಲಕನನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಎರಡು ದಿನಗಳ ಹಿಂದೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಓಕಳಿ ಗ್ರಾಮದ ಬಳಿ ಹಿಜಬ್‌ಧಾರಿ ವಿದ್ಯಾರ್ಥಿನಿಯರು ಊರಿಗೆ ಹೊರಟಿದ್ದರು. ಈ ವೇಳೆ ಚಾಲಕ ನೀನು ಮುಸ್ಲಿಂ ಇದಿಯಲ್ವ.. ಬುರ್ಖಾ ಧರಿಸಿ ಬಾ.. ಆಗ ಮಾತ್ರ ಬಸ್ ಹತ್ತಲು ಬಿಡುತ್ತೇನೆ ಎಂದು ಹೇಳಿದ್ದ. ಆಗ ಶಿಕ್ಷಕರು ಮತ್ತು ಬಸ್‌ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿತ್ತು. ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬಸ್‌ ಚಾಲಕನನ್ನ ಅಮಾನತುಗೊಳಿಸಿರುವುದಾಗಿ ಕೆಕೆಆರ್‌ಟಿಸಿ ದೃಢಪಡಿಸಿದೆ.

See also  ಕಾರು ಅಡ್ಡ ಹಾಕಿದ್ದಕ್ಕೆ ಬ್ಯಾನೆಟ್‌ ಮೇಲೆ ಪೊಲೀಸ್‌ ಸಿಬ್ಬಂದಿಯನ್ನೇ ಎಳೆದೊಯ್ದ ಚಾಲಕ..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget   Ad Widget