ಕ್ರೈಂ

ಸಂಸದ ಪ್ರತಾಪ್‌ಸಿಂಹ ವಿರುದ್ಧ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಹೆಡ್ ಕಾನ್‌ಸ್ಟೆಬಲ್​ ಅಮಾನತು

ನ್ಯೂಸ್‌ ನಾಟೌಟ್‌: ಫೇಸ್​ಬುಕ್​ನಲ್ಲಿ ಸಂಸದ ಪ್ರತಾಪ್‌ಸಿಂಹ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಮೈಸೂರಿನ ವಿವಿಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್‌ಸ್ಟೆಬಲ್​ ಅವರನ್ನು ಅಮಾನತು ಮಾಡಲಾಗಿದೆ.

ಟ್ರಾಫಿಕ್ ಹೆಡ್ ಕಾನ್‌ಸ್ಟೆಬಲ್​ ಬಿ.ಪ್ರದೀಪ್ ಫೇಸ್​ಬುಕ್​ನಲ್ಲಿ ಬಿಜೆಪಿ ಸಂಸದ ಪ್ರತಾಪ್‌ಸಿಂಹ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್‌ ಹಾಕಿದ್ದರು. ಇದನ್ನು ಗಮನಿಸಿದ ಸಂಸದ ಪ್ರತಾಪ್‌ಸಿಂಹ, ಕಮೆಂಟ್ ಸ್ಕ್ರೀನ್​ಶಾಟ್ ಜತೆ ಪೊಲೀಸ್ ಕಮಿಷನರ್​​ಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ಸಂಸದರ ದೂರಿನ ಮೇರೆಗೆ ಇಲಾಖಾ ವಿಚಾರಣೆ ಬಾಕಿ ಇರಿಸಿ ಟ್ರಾಫಿಕ್ ಹೆಡ್ ಕಾನ್‌ಸ್ಟೆಬಲ್​ ಬಿ.ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.

Related posts

ಶಬರಿಮಲೆ ದೇಗುಲದ ಸ್ಕೈ ವಾಕ್ ಮೇಲಿಂದ ಜಿಗಿದು ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆ..! ಇಲ್ಲಿದೆ ವೈರಲ್ ವಿಡಿಯೋ

ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ..! ಮಕ್ಕಳನ್ನು ಸ್ಥಳಾಂತರಗೊಳಿಸಿದ ಪೊಲೀಸರು

ಚೆಂಬು ಗ್ರಾಮದ ಓಮ್ನಿ ಪಲ್ಟಿ, ಕುತ್ತಿಗೆಗೆ ಸರಳು ತಾಗಿ 1 ವರ್ಷದ ಮಗು ಸಾವು