ದೇಶ-ಪ್ರಪಂಚದೇಶ-ವಿದೇಶರಾಜಕೀಯವೈರಲ್ ನ್ಯೂಸ್

ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ದಿಢೀರ್ ಮುಂದೂಡಿಕೆ..! ರಂಗೇರಿದ ರಾಜಕೀಯ ಚಟುವಟಿಕೆ

ನ್ಯೂಸ್ ನಾಟೌಟ್ : ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ದಿನಾಂಕ ಮುಂದೂಡಿಕೆಯಾಗಿದೆ ಎಂದು ವರದಿ ತಿಳಿಸಿದೆ. ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಪಕ್ಷ 175 ಸ್ಥಾನಗಳಲ್ಲಿ 135 ಸ್ಥಾನಗಳನ್ನು ಗೆದ್ದು, ಅಧಿಕಾರದ ಹಿಡಿದಿದೆ.

ಆ ಮೂಲಕ ಜಗನ್‌ ಮೋಹನ್‌ ಅವರ ವೈಎಸ್‌ಆರ್‌ಸಿಪಿ ಪಕ್ಷದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿ, ಮತ್ತೆ ಆಂಧ್ರ ಸಿಎಂ ಆಗಿ ಚುಕ್ಕಾಣಿ ಹಿಡಿಯಲಿದ್ದಾರೆ. ಟಿಡಿಪಿ, ಜನಸೇನಾ ಹಾಗೂ ಬಿಜೆಪಿ ಮೈತ್ರಿಯಾಗಿ ಒಟ್ಟು 164 ಸ್ಥಾನಗಳನ್ನು ಪಡೆದುಕೊಂಡಿದೆ. ಇದೇ ಜೂನ್‌ 9 ರಂದು ಅಮರಾವತಿಯಲ್ಲಿ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿತ್ತು. ಇದೀಗ ಪ್ರಮಾಣವಚನದ ಕಾರ್ಯಕ್ರಮ ಮುಂದೂಡಿಕೆ ಆಗಿದೆ.

ಅದೇ ದಿನ ಪ್ರಧಾನಿಯಾಗಿ ಮೋದಿ ಮೂರನೇ ಬಾರಿ ಪ್ರಮಾಣ ವಚನ ಸೀಕ್ವರಿಸಲಿದ್ದಾರೆ ಎನ್ನಲಾಗಿದ್ದು, ಈ ಕಾರಣದಿಂದ ನಾಯ್ಡು ಪ್ರಮಾಣ ವಚನ ಕಾರ್ಯಕ್ರಮ ಮುಂದೂಡಿಕೆ ಆಗಿದೆ ಎನ್ನಲಾಗಿದೆ. ಜೂನ್ 12 ರಂದು ಅಮರಾವತಿಯಲ್ಲಿ ಆಂಧ್ರದ ನೂತನ ಸಿಎಂ ಆಗಿ ಚಂದ್ರಬಾಬು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ ಎಂದು ವರದಿ ತಿಳಿಸಿದೆ.

Click 👇

https://newsnotout.com/2024/06/annaimalai-dmk-photo-and-issue-related-to-election
https://newsnotout.com/2024/06/loka-sabha-election-and-bjp-ministers-are-lost-thair-majority
https://newsnotout.com/2024/06/mangaluru-bhajaragadala-and-congress-issue-at-celebration
https://newsnotout.com/2024/06/x-tweeter-and-its-rules-on-users-kannada-news

Related posts

ಬಂಧನದ ವೇಳೆ ಪೊಲೀಸ್ ಸಿಬ್ಬಂದಿಗೆ ಚಾಕುವಿನಿಂದ ಇರಿದ ಆರೋಪಿ..! ಕೊಲೆ ಆರೋಪಿಯ ಎರಡೂ ಕಾಲಿಗೆ ಗುಂಡೇಟು..!

ಮಂಗಳೂರು: ಶರಾವು ಗುಳಿಗನ ಕೋಪಕ್ಕೆ ತುತ್ತಾದ ‘ಹಂಪನಕಟ್ಟೆ ಸ್ಮಾರ್ಟ್ ಸಿಟಿ’..!, ಮೂರು ವರ್ಷದ ಹಿಂದೆ 70 ಕೋಟಿ ಮಂಜೂರಾಗಿದ್ದರೂ ಕಾಮಗಾರಿ ಮುಗಿಸಲು ಒದ್ದಾಟ..! ಅಷ್ಟಕ್ಕೂ ಕಾಂಟ್ರಾಕ್ಟರ್ ಮಾಡಿದ ಆ ತಪ್ಪೇನು..?

‘ಅಜ್ಜಾವರದ ದಲಿತ ಕಾಲೋನಿಗೆ ಮಾನವೀಯತೆಯಿಂದ ನೀರು ಬಿಡಿ..ಜನಾಡಳಿತ ಇರುವುದೇ ಜನರ ಕಷ್ಟಕ್ಕೆ ಸ್ಪಂದಿಸುವುದಕ್ಕಲ್ಲವೇ..?