ರಾಜಕೀಯವೈರಲ್ ನ್ಯೂಸ್ಶಿಕ್ಷಣ

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದ ಸರ್ಕಾರ..! ಸರ್ಕಾರದ ವಿವಾದಿತ ಆದೇಶ ಪ್ರತಿಯಲ್ಲೇನಿದೆ..?

165

ನ್ಯೂಸ್‌ ನಾಟೌಟ್‌ : ಕನ್ನಡ ಮತ್ತು ಸಂಸೃತಿ ಇಲಾಖೆ ರಾಷ್ಟ್ರಕವಿ ಕುವೆಂಪು ರಚಿಸಿದ ನಾಡಗೀತೆಯ ಬಗ್ಗೆ ವಿವಾದಿತ ಆದೇಶ ಹೊರಡಿಸಿದೆ.

ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ ಎನ್ನಲಾಗಿದೆ. ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶವನ್ನು ಹೊರಡಿಸಿದೆ.

ಈ ಹಿಂದೆ ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು.

ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ ಈಗ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ ಎನ್ನಲಾಗಿದೆ.

See also  ಯುವ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರ ಸ್ವಾಮಿ ರಾಜಿನಾಮೆ! ಕುತೂಹಲ ಮೂಡಿಸಿದ ಯುವ ದಳಪತಿಯ ನಡೆ!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget