ಮಂಗಳೂರು: ಇಲ್ಲಿನ ಕೂಳೂರು ಸಮೀಪದ ವಿ ಆರ್ ಎಲ್ ಬಳಿಯಿರುವ ನಾಗನ ಕಟ್ಟೆಯನ್ನು ದುಷ್ಕರ್ಮಿಗಳು ಪುಡಿ ಮಾಡಿರುವ ಘಟನೆ ವರದಿಯಾಗಿದೆ. ಕೋಮು ಸೂಕ್ಷ್ಮ ಪ್ರದೇಶವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಕಿಡಿಗೇಡಿಗಳು ಬೇಕೆಂದಲೇ ಇಂತಹ ಕೃತ್ಯ ಎಸಗುತ್ತಿದ್ದಾರೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ. ಅಪರಾಧಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.