Latestಕರಾವಳಿಕಾಸರಗೋಡುಕೇರಳಮಂಗಳೂರುರಾಜಕೀಯವೈರಲ್ ನ್ಯೂಸ್

ನಳಿನ್ ಕುಮಾರ್ ಕಟೀಲ್‌ ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದ ಡಿಕೆ ಶಿವಕುಮಾರ್..! ಮಧೂರು ದೇವಸ್ಥಾನದಲ್ಲಿ ಡಿಕೆಶಿ ಪ್ರಾರ್ಥನೆ..!

338
Spread the love

ನ್ಯೂಸ್ ನಾಟೌಟ್: ನಳಿನ್ ಕುಮಾರ್ ಕಟೀಲ್‌ ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮಧೂರು ದೇವಸ್ಥಾನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು(ಎ.06) ಹೇಳಿದ್ದಾರೆ.

ಕೇರಳದ ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ಡಿಕೆ ಶಿವಕುಮಾರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಡಿಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಜೊತೆಯಾಗಿದ್ದರು. ಈ ವೇಳೆ ನಳಿನ್ ಕುಮಾರ್ ಪರ ಡಿಕೆಶಿ ಬ್ಯಾಟಿಂಗ್ ಮಾಡಿದ್ದಾರೆ.

ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಡಿಕೆಶಿ, ನನ್ನ ಮಿತ್ರ, ಮಾಜಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಇದ್ದಾರೆ. ಅವರು ಮಾಜಿ ಅಂದುಕೊಳ್ಳೋದು ಬೇಡ, ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾನೆ, ಝೀರೋ ಹೀರೋ ಆಗುತ್ತಾನೆ.

ನಾನು ಮತ್ತು ನೀವು ಒಂದೇ ವೇದಿಕೆಯಲ್ಲಿ ದೇವರನ್ನ ಪ್ರಾರ್ಥನೆ ಮಾಡಿದ್ದೇವೆ. ಭಗವಂತ ನಿಮ್ಮ ಎಲ್ಲಾ ವಿಘ್ನ ನಿವಾರಣೆ ಮಾಡಿ ಮತ್ತೆ ಈ ರಾಜ್ಯದಲ್ಲಿ ಸೇವೆ ಮಾಡುವ ಅವಕಾಶ ಕೊಡಲಿ. ಮತ್ತೆ ನಿಮಗೆ ಅವಕಾಶ ಸಿಗಲಿ ಅಂತ ನಾನೂ ಕೂಡ ಪ್ರಾರ್ಥನೆ ಮಾಡುತ್ತೇನೆ ಎಂದರು.

ರೈಲ್ವೆಯಲ್ಲಿ 1000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೂಡಲೇ ಅರ್ಜಿ ಸಲ್ಲಿಸಿ, ಇಲ್ಲಿದೆ ಸಂಪೂರ್ಣ ಮಾಹಿತಿ

ಕೇರಳ: ಕಂಪನಿಯ ಟಾರ್ಗೆಟ್ ಪೂರ್ತಿಗೊಳಿಸದ್ದಕ್ಕೆ ನಾಯಿಗಳಂತೆ ಮೊಣಕಾಲಿನಲ್ಲಿ ನಡೆಸಿ ವಿಚಿತ್ರ ಶಿಕ್ಷೆ..! ತನಿಖೆಗೆ ಆದೇಶಿಸಿದ ಕಾರ್ಮಿಕ ಇಲಾಖೆ..!

ಬೀಳ್ಕೊಡುಗೆ ಸಮಾರಂಭದಂದು ಭಾಷಣ ಮಾಡುತ್ತಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು..! ವಿಡಿಯೋ ವೈರಲ್

ದೇಶದ ಮೊದಲ ಸಮುದ್ರ ಸೇತುವೆ ಇಂದು(ಎ.6) ಉದ್ಘಾಟನೆ, ರಾಮನವಮಿಯಂದು 550 ಕೋಟಿ ರೂ. ವೆಚ್ಚದ ವಿಶಿಷ್ಟ ಸೇತುವೆ ಮೋದಿಯಿಂದ ಲೋಕಾರ್ಪಣೆ

See also  ಟ್ರಂಪ್ ಸುಂಕಕ್ಕೆ ಜಾಗತಿಕ ಷೇರು ಮಾರುಕಟ್ಟೆ ಪತನ..! ಕೋವಿಡ್ ಸಾಂಕ್ರಾಮಿಕದ ಕುಸಿತದ ಬಳಿಕ ಇದೇ ಮೊದಲ ಬಾರಿಗೆ ದೊಡ್ಡ ಆಘಾತ..!
  Ad Widget   Ad Widget   Ad Widget   Ad Widget   Ad Widget   Ad Widget