ಕರಾವಳಿಕೊಡಗುಸುಳ್ಯ

ನಾನಿನ್ನೂ ರಾಜೀನಾಮೆ ಕೊಟ್ಟಿಲ್ಲ..ಮಾಧ್ಯಮಗಳಲ್ಲಿ ಬಂದಿದ್ದು ಸತ್ಯಕ್ಕೆ ದೂರವಾಗಿದ್ದು: ನಳಿನ್ ಕುಮಾರ್ ಕಟೀಲ್

199

ನ್ಯೂಸ್ ನಾಟೌಟ್ : ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನಿನ್ನೂ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾಗಿದ್ದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳೀನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ. ರಾಜೀನಾಮೆ ಪ್ರಹಸನದ ಬೆನ್ನಲ್ಲೇ ಹೇಳಿಕೆಯನ್ನು ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.

ಬಳ್ಳಾರಿಯಲ್ಲಿ ಮಾತನಾಡಿದ್ದ ನಳಿನ್ ಕುಮಾರ್ ಕಟೀಲ್ , ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.

See also  ಎಚ್ಚರಿಕೆ ನಡುವೆಯೂ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣರ ಮತ್ತೊಂದು ಡೀಪ್​ ಫೇಕ್​ ವಿಡಿಯೋ ​..!,ವೈರಲ್ ವಿಡಿಯೋ ವೀಕ್ಷಿಸಿ..
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget