ಕರಾವಳಿ

ಸಂಸದ ನಳೀನ್ ಕುಮಾರ್ ಕಟೀಲ್ ಮೇಲಿನ ಪೊಲೀಸರ ಎಫ್ಐಆರ್ ರದ್ದು

367
Spread the love

ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕದ್ರಿ ಪೂರ್ವ ಠಾಣೆ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.

ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ನಿನ್ನೆ ವಿಚಾರಣೆ ನಡೆಸಿ, ಮಂಗಳೂರು 2ನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ವಿಚಾರಣೆಯನ್ನು ರದ್ದುಪಡಿಸಿದೆ.

ಏನಿದು ಘಟನೆ?

ಬಿಜೆಪಿ ಯುವ ಮೋರ್ಚಾ ವತಿಯಿಂದ 2017ರ ಸೆಪ್ಟೆಂಬರ್ 7ರಂದು ಬೆಂಗಳೂರಿನಿಂದ ಮಂಗಳೂರಿಗೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸಲು ಮುಂದಾಗಿದ್ದ ಬಿಜೆಪಿ ಕಾರ್ಯಕರ್ತರನ್ನು ಮಂಗಳೂರು ಪೂರ್ವ ಠಾಣಾ ಇನ್ಸ್ ಪೆಕ್ಟರ್ ಬಂಧಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದಿದ್ದ ನಳೀನ್ ಕುಮಾರ್ ಕಟೀಲ್, ತಕ್ಷಣವೇ ಠಾಣೆಗೆ ತೆರಳಿ ಕಾರ್ಯಕರ್ತರ ಬಂಧನದ ಕುರಿತ ಡೈರಿಯನ್ನು ತೋರಿಸುವಂತೆ ಇನ್ಸ್ ಪೆಕ್ಟರ್ ಅವರನ್ನು ಕೇಳಿದ್ದರು. ಇದಕ್ಕೆ ಪ್ರತಿಯಾಗಿ ಪೊಲೀಸ್ ಇನ್ಸ್ ಪೆಕ್ಟರ್ ಮಾರುತಿ ಜಿ. ನಾಯಕ್, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದಡಿ ಕಟೀಲ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣಾಧಿಕಾರಿಗೆ ದೂರು ನೀಡಿದ್ದರು.

See also  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ರಾತ್ರಿಯಿಂದಲೇ ವಾರಾಂತ್ಯ ಕಫ್ಯೂ ಜಾರಿ
  Ad Widget   Ad Widget   Ad Widget   Ad Widget   Ad Widget   Ad Widget