ನ್ಯೂಸ್ ನಾಟೌಟ್: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎದುರು ಬಿಜೆಪಿ ಮಕಾಡೆ ಮಲಗಿದೆ. ಈ ಸೋಲಿನ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಬಿಜೆಪಿಯ ವರಿಷ್ಠರನ್ನು ಭೇಟಿಯಾಗಿ ತನ್ನ ರಾಜೀನಾಮೆಯನ್ನು ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಸಂಪೂರ್ಣವಾಗಿ ವಿಫಲವಾಗಿದ್ದರಿಂದ ರಾಜೀನಾಮೆ ಅನಿವಾರ್ಯವಾಗಿದೆ. ಈ ಹಿಂದೆಯೂ ಸೋಲಿನ ಹೊಣೆ ಹೊತ್ತು ಹಲವು ನಾಯಕರು ರಾಜೀನಾಮೆ ನೀಡಿದ ಉದಾಹರಣೆಯಿದೆ. ಈ ಹಿನ್ನೆಲೆಯಲ್ಲಿ ನಳಿನ್ ಕೂಡ ರಾಜೀನಾಮೆ ನೀಡಬಹುದು ಎನ್ನುವ ಚರ್ಚೆ ಶುರುವಾಗಿದೆ.