ನ್ಯೂಸ್ ನಾಟೌಟ್: ನಿರಂತರ ಬೆಲೆ ಏರಿಕೆಗೆ ಸುಸ್ತಾಗಿರುವ ರಾಜ್ಯದ ಜನರಿಗೆ ಹಾಲಿನ ದರ ಏರಿಕೆಯ ಬಿಗ್ ಶಾಕ್ ಎದುರಾಗಿದೆ. ಇಂದು(ಮಾ.27) ಸಿಎಂ ಸಿದ್ದರಾಮಯ್ಯ ಜೊತೆ KMF ಅಧಿಕಾರಿಗಳು ಮಹತ್ವದ ಸಭೆ ಮಾಡಿದ್ದಾರೆ. ರಾಜ್ಯದಲ್ಲಿ ಹಾಲಿನ ದರ ಪರಿಷ್ಕರಣೆಗೆ ಕ್ಯಾಬಿನೆಟ್ ವೀಟಿಂಗ್ ನಲ್ಲಿ ಇಂದೇ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ನಂದಿನಿಹಾಲಿನ ದರ ಲೀಟರ್ ಗೆ 4 ರೂ. ಹೆಚ್ಚಿಸಲಾಗಿದೆ.
ಕೆಎಂಎಫ್ ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆ ಹಾಲಿನ ದರ ಏರಿಕೆ ಫಿಕ್ಸ್ ಎಂದು ಹೇಳಿತ್ತು. ನಂದಿನಿ ಹಾಲಿನ ದರ ಏರಿಕೆಗೆ ರಾಜ್ಯ ಸರ್ಕಾರ ಕೂಡ ತಯಾರಿ ನಡೆಸಿತ್ತು.
ಕೆಲ ದಿನಗಳ ಹಿಂದೆ ರಾಜ್ಯದ ರೈತರು ಕೆಎಂಎಫ್ ಮುಂದೆ ಹಾಲಿನ ದರ ಏರಿಸುವಂತೆ ಪ್ರತಿಭಟನೆ ನಡೆಸಿದ್ದರು. ಹಾಲು ಒಕ್ಕೂಟಗಳು ನಂದಿನಿ ಹಾಲಿನ ದರ ಏರಿಸುವಂತೆ ಕೆಎಂಎಫ್‌ಗೆ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕೆಎಂಎಫ್ ಆಡಳಿತ ಮಂಡಳಿ ರಾಜ್ಯದಲ್ಲಿ ಹಾಲಿನ ದರ ಏರಿಕೆಗೆ ಅನುಮತಿ ನೀಡುವಂತೆ ಸರ್ಕಾರ ಮನವಿ ಮಾಡಿತ್ತು. ಆ ಮನವಿಗೆ ಈಗ ಒಪ್ಪಿಗೆ ಸಿಕ್ಕಿದ್ದು, ಪ್ರತೀ ಲೀಟರ್ ನಂದಿನಿ ಹಾಲಿಗೆ 4 ರೂಪಾಯಿ ಹೆಚ್ಚಿಸಲಾಗಿದೆ.
ರಾಜ್ಯ ಸರ್ಕಾರಕ್ಕೆ ಕೆಎಂಎಫ್ ಪ್ರತಿ ಲೀಟರ್‌ಗೆ 10 ರೂಪಾಯಿ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಕಳಿಸಿದೆ. ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಅವರು ಇಂದು ಸಿಎಂ ಸಿದ್ದರಾಮಯ್ಯ ಅವರ ಜೊತೆ ಹಾಲಿನ ದರ ಏರಿಕೆ ವಿಚಾರವಾಗಿ ಸಭೆ ನಡೆಸಲಿದ್ದಾರೆ.