ಕ್ರೈಂರಾಜಕೀಯವೈರಲ್ ನ್ಯೂಸ್

ಮೋದಿ ತೀರಿಕೊಂಡ್ರೆ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ? ಎಂದು ಕೇಳಿದ ಕಾಂಗ್ರೆಸ್ ಶಾಸಕ..! ಏನಿದು ವಿವಾದಾತ್ಮಕ ಹೇಳಿಕೆ..?

235

ನ್ಯೂಸ್ ನಾಟೌಟ್: ಪ್ರಧಾನಿ ನರೇಂದ್ರ ಮೋದಿ (PM Modi) ತೀರಿಕೊಂಡರೆ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ ಎಂದು ಕಾಂಗ್ರೆಸ್ ಹಿರಿಯ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿಯ ಕಾಗವಾಡ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡುವ ವೇಳೆ ಮೋದಿ ವಿರುದ್ಧ ಈ ರೀತಿ ಮಾತನಾಡಿದ್ದಾರೆ ಎನ್ನಲಾಗಿದೆ.

ಮೋದಿ ತೀರಿಕೊಂಡರೆ ಈ ದೇಶದಲ್ಲಿ ಮುಂದೆ ಪ್ರಧಾನಿ ಆಗೋದೇ ಇಲ್ಲವಾ? ಮೋದಿ ತೀರಿಕೊಂಡರೆ 140 ಕೊಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ? ಎಂದು ಪ್ರಶ್ನೆ ಮಾಡಿದ್ದಾರೆ. ಈಗಿನ ಯುವಕರು ಮೋದಿ ಮೋದಿ ಅನ್ನುತ್ತಾರೆ, ಮೋದಿನ ತೆಗೆದುಕೊಂಡು ನೆಕ್ಕುತ್ತೀರಾ? ರಾಜ್ಯದಲ್ಲಿ ಮತದಾರರು ಕಾಂಗ್ರೆಸ್ ಸರ್ಕಾರ ಬೇಕು ಅಂತಾರೆ, ಆದ್ರೆ ಕೇಂದ್ರದಲ್ಲಿ ಮೋದಿನೇ ಬರಬೇಕು ಅಂತಾರೆ. ಮೋದಿ ಇಲ್ಲಿ ಬಂದು ನೋಡುತ್ತಾರಾ? ಇಲ್ಲಿ ಏನಾದರೂ ಸಮಸ್ಯೆ ಆದರೆ ಮೋದಿ ಬರುವುದಿಲ್ಲ. ಇಲ್ಲಿ ನಾವೇ ನಿಮ್ಮ ಸಮಸ್ಯೆ ಆಲಿಸಬೇಕು. ನರೇಂದ್ರ ಮೋದಿ 3,000 ಕೋಟಿ ವಿಮಾನದಲ್ಲಿ ಓಡಾಡ್ತಾರೆ, 4 ಲಕ್ಷ ರೂಪಾಯಿ ಸೂಟ್ ಹಾಕಿಕೊಳ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ನಾನೂ ವಿದ್ಯಾವಂತ ಇದ್ದೀನಿ, ನನಗೂ ಬುದ್ಧಿ ಇದೆ, ನಾನೇನು ಕುರಿ ಅಲ್ಲ. ನಾನು ಸಹ ಈ ದೇಶವನ್ನ ಸಮರ್ಥವಾಗಿ ಮುನ್ನಡೆಸುತ್ತೇನೆ ಎನ್ನುವ ಆತ್ಮವಿಶ್ವಾಸ ಇದೆ ಎಂದು ಹೇಳಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.

See also  ಕ್ರಿಕೆಟ್ ದಂತಕಥೆ ವಾರ್ನ್ ಇನ್ನಿಲ್ಲ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget