ನ್ಯೂಸ್ ನಾಟೌಟ್: ಪಾಟ್ನಾ ನಗರದಲ್ಲಿ ಗುರುವಾರ(ಮಾ.20) ನಡೆದ ಕ್ರೀಡಾಕೂಟವೊಂದರಲ್ಲಿ ರಾಷ್ಟ್ರಗೀತೆ ಮೊಳಗುತ್ತಿರುವ ಸಂದರ್ಭದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕಮಾರ್ ನಗುತ್ತಾ ಹತ್ತಿರದ ಅಧಿಕಾರಿ ಜೊತೆ ಮಾತನಾಡುತ್ತಾ ಅಗೌರವ ತೋರಿರುವ ದೃಶ್ಯ ತುಣುಕುಗಳು ಜಾಲತಾಣಗಳಲ್ಲಿ ವೈರಲ್ ಆಗಿವೆ.
ಘಟನೆಯ ಬೆನ್ನಲ್ಲೇ ವಿರೋಧ ಪಕ್ಷಗಳು ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿವೆ. ನಿತೀಶ್ ಸರ್ಕಾರದಲ್ಲಿ ಹಿಂದೆ ಉಪಮುಖ್ಯಮಂತ್ರಿಯಾಗಿದ್ದ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್, “ಇದು ರಾಜ್ಯ ಮತ್ತು ರಾಷ್ಟ್ರಕ್ಕೆ ಮಾಡಿದ ಅವಮಾನ” ಎಂದಿದ್ದಾರೆ.
ಪಾಟ್ನಾದ ಪಾಟಲೀಪುತ್ರ ಕ್ರೀಡಾ ಸಂಕೀರ್ಣದಲ್ಲಿ ಗುರುವಾರ ಸೆಪಕ್ಟಕ್ರಾ ವಿಶ್ವಕಪ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದ ವೇಳೆ ನಿತೀಶ್ ಕುಮಾರ್ ವೇದಿಕೆಯಲ್ಲೇ ಇದ್ದ ಐಎಎಸ್ ಅಧಿಕಾರಿ ಹಾಗೂ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಜತೆ ನಗುತ್ತಾ ಮತನಾಡುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
राष्ट्रगान का अपमान
नहीं सहेगा हिंदुस्तान।बिहारवासियों, अब भी कुछ बचा है? pic.twitter.com/tz3MMgIOAl
— Lalu Prasad Yadav (@laluprasadrjd) March 20, 2025
ಅಧಿಕಾರಿಯ ಗಮನ ಸೆಳೆಯಲು ಮೈ ಮುಟ್ಟುತ್ತಿರುವುದು ಕಾಣಿಸುತ್ತಿದೆ. ಒಂದು ಹಂತದಲ್ಲಿ ಸಭೆಯಲ್ಲಿದ್ದ ಪ್ರೇಕ್ಷಕರತ್ತ ನಕ್ಕು ಕೈಮುಗಿದು ನಮಸ್ಕರಿಸುತ್ತಿದ್ದಾರೆ. ದೀಪಕ್ ಕುಮಾರ್ ಮುಖ್ಯಮಂತ್ರಿಗಳೊಂದಿಗೆ ನಿಶ್ಶಬ್ದವಾಗಿ ಇರುವಂತೆ ಸನ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ: `ಮಂಡ್ಯದ ಗಂಡು’ ಸಿನಿಮಾದ ಖ್ಯಾತ ನಿರ್ದೇಶಕ, ಬರಹಗಾರ ನಿಧನ..! 55 ಸಿನಿಮಾಗಳನ್ನು ನಿರ್ದೇಶಿಸಿದ್ದ ಹಿರಿಯ ನಿರ್ದೇಶಕ