Uncategorized

ತಮಿಳುನಾಡು ಸಂಸದ ಹೃದಯಾಘಾತದಿಂದ ಮೃತ್ಯು;ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಹಿರಿಯ ನಾಯಕ

ನ್ಯೂಸ್‌ ನಾಟೌಟ್‌: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಎ.ಗಣೇಶಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗಣೇಶ್ ಮೂರ್ತಿ ಅವರು ಎಂಡಿಎಂಕೆ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಈರೋಡೆ ಕ್ಷೇತ್ರದಲ್ಲಿ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು. ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಸಂಸದ ಎ ಗಣೇಶಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

2024ರ ಚುನಾವಣೆಯಲ್ಲಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು ಆದರೆ ಪಕ್ಷ ಯಾವುದೇ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆಗೆ ಇಳಿದಿದೆ. ಇದರಿಂದ ಗಣೇಶ್ ಅವರು ಟಿಕೆಟ್ ವಂಚಿತರಾಗಿದ್ದು, ಇದರಿಂದ ಹತಾಶೆಗೊಳಗಾದ ಅವರು ಮಾರ್ಚ್ ೨೪ ರಂದು ಆತ್ಮಹತ್ಯೆಗೆ ಯತ್ನಿಸಿದ್ದರು.ಗಂಭೀರ ಸ್ಥಿತಿಯಲ್ಲಿದ್ದ ಅವರು ಹಠಾತ್ ಹೃದಯಾಘಾತಗೊಂಡು ನಿಧನಹೊಂದಿದ್ದಾರೆ ಎಂದು ತಿಳಿದು ಬಂದಿದೆ.

Related posts

ಸುಳ್ಯ: ಬೈಕ್‌ ..ಸ್ಕೂಟಿಯಲ್ಲಿ ತ್ರಿಬಲ್‌ ರೈಡ್‌ ನೋಡಿದ್ದೇವೆ, ಇದ್ಯಾವ ಸೀಮೆ ರೈಡಿಂಗ್‌ ಮಾರಾಯ್ರೆ..?

ಅಧಿಕಾರಕ್ಕೆ ಬಂದರೆ ಪ್ರತಿಮನೆಗೂ 200 ಯೂನಿಟ್ ಉಚಿತ ವಿದ್ಯುತ್: ಡಿಕೆಶಿ ಘೋಷಣೆ

ಭಾರಿ ಸುದ್ದಿಯಲ್ಲಿರುವ ಸ್ಯಾಂಟ್ರೋ ರವಿ ಯಾರು? ಈತನ ಹಿನ್ನೆಲೆಯೇನು? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್