ಸುಳ್ಯ

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ದಿನಾಚರಣೆ

ನ್ಯೂಸ್ ನಾಟೌಟ್: ಜನರಲ್ಲಿ ಆರೋಗ್ಯ ಮತ್ತು ಯೋಗಕ್ಷೇಮದ ಮಹತ್ವದ ಬಗ್ಗೆ ಅರಿವು ಮೂಡಿಸಲು ಪ್ರತಿವರ್ಷ ಸೆ.1 ರಿಂದ 7 ರವರೆಗೆ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹವನ್ನು ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಮುದಾಯ ವೈದ್ಯಕೀಯಶಾಸ್ತ್ರ ವಿಭಾಗದ ವತಿಯಿಂದ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ದಿನವನ್ನು ಸೋಮವಾರ (ಸೆ.2 ರಂದು) ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು.

ಸಂಸ್ಥೆಯ ಸಮುದಾಯ ವೈದ್ಯಕೀಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥ ಡಾ. ದಿನೇಶ್ ಪಿವಿ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ಕುರಿತಾದ ಮಾಹಿತಿ ನೀಡಿದರು. ಸಮುದಾಯ ವೈದ್ಯಶಾಸ್ತ್ರ ವಿಭಾಗದ ಸ್ನಾತಕೋತ್ತರ ಪದವೀಧರ ಡಾ ಎಂ.ರಾಜಾಸುದರ್ಶನ್ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ದಿನಾಚರಣೆಯ ಮಹತ್ವ ಹಾಗೂ ಪೌಷ್ಟಿಕ ಆಹಾರದ ಕುರಿತು ಮಾಹಿತಿಯನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಕಾರ್ಯಕ್ರಮದ ಅಂಗವಾಗಿ ನಡೆಸಲಾದ ರಸಪ್ರಶ್ನೆ ಸ್ಪರ್ಧೆಯ ವಿಜೇತರ ಹೆಸರನ್ನು ಘೋಷಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳ ವಿಭಾಗದ ಪ್ರಾಧ್ಯಾಪಕರಾದ ಡಾ. ಸುಧಾ ರುದ್ರಪ್ಪ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

Related posts

ಸುಳ್ಯ: ಡಿ. 9,10ಕ್ಕೆ ಬ್ರಾಹ್ಮಣ ಸಂಘ (ರಿ)ದಿಂದ ವಿಪ್ರ ಸಮಾವೇಶ,ಕಲ್ಮಡ್ಕದಲ್ಲಿ ಕಾರ್ಯಕ್ರಮ ಆಯೋಜನೆ

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ಸಮಾಜಕಾರ್ಯ ವತಿಯಿಂದ ಕ್ಷೇತ್ರ ಅಧ್ಯಯನ, ಕಡಮಾಜೆ ಫಾರ್ಮ್ ಗೆ ಭೇಟಿ, ಕೃಷಿ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ

‘ಅಣ್ಣ ನೀನು, ತಂಗಿ ನಾನು’, ಅಂಜಲಿ ಮೊಂಟೆಸ್ಸರಿ ಸ್ಕೂಲ್ ಮಕ್ಕಳಿಗೆ ಖುಷಿಯೋ ಖುಷಿ