Latestಕ್ರೈಂದೇಶ-ವಿದೇಶ

ಎನ್‌ ಕೌಂಟರ್‌ ನಲ್ಲಿ ಇಬ್ಬರು ನಕ್ಸಲರ ಹತ್ಯೆ..! ಹತ್ಯೆಯಾದಾಕೆಗಾಗಿ ಈ ಹಿಂದೆ ₹14 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು..!

430

ನ್ಯೂಸ್‌ ನಾಟೌಟ್ : ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು (ಮಾ.01) ಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆಗಳ ಜಂಟಿ ತಂಡವು ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಪ್ರದೇಶದಲ್ಲಿ ನಕ್ಸಲರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಲಾಯಿತು. ಜಿಲ್ಲಾ ಮೀಸಲು ಪೊಲೀಸ್‌ ಪಡೆ (ಡಿಆರ್‌ಜಿ) ಮತ್ತು ಕೋಬ್ರಾ ಬೆಟಾಲಿಯನ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.ಫೆಬ್ರವರಿ 20ರಂದು ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲರು ಮೃತಪಟ್ಟಿದ್ದರು.

ಈಗ ಹತ್ಯೆಯಾದವರಲ್ಲಿ ಕಮಾಂಡರ್ ಆಶಾ ಸೇರಿದ್ದು, ಅವರ ಸುಳಿವು ನೀಡಿದವರಿಗೆ ₹14 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಮಧ್ಯಪ್ರದೇಶ ಪೊಲೀಸರು ತಿಳಿಸಿದ್ದರು. ಛತ್ತೀಸ‌ಗಢದಲ್ಲಿ ‘ಕೆಬಿ’ ಹೆಸರಿನಲ್ಲಿ ನಕ್ಸಲ್ ಸಂಘಟನೆಯನ್ನು ಆಶಾ ಕಟ್ಟುತ್ತಿದ್ದರು. ಉಳಿದ ನಕ್ಸಲರ ಬಗೆಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದರು.

See also  ಯಮಹಾ ಬೈಕ್ ಶೋರೂಂಗೆ ಬೆಂಕಿ..! ಸುಟ್ಟು ಭಸ್ಮವಾದ 50ಕ್ಕೂ ಹೆಚ್ಚು ಬೈಕ್‍ ಗಳು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget