ನ್ಯೂಸ್ ನಾಟೌಟ್: ರಾಜ್ಯದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನೀಟ್ (NEET) ಪರೀಕ್ಷೆ ಇಂದು(ಮೇ.4) ನಡೆಯಲಿದೆ. ಒಟ್ಟು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ.
ಪರೀಕ್ಷೆಯು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಮಧ್ಯಾಹ್ನ 2.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಮೂರು ತಾಸುಗಳ ಕಾಲ ಇರಲಿದೆ. ಅಭ್ಯರ್ಥಿಗಳು ಬೆಳಗ್ಗೆ 11ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಅವಕಾಶವಿದೆ.
ನೀಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಾತಿ ಪತ್ರದೊಂದಿಗೆ, ಕಾಲೇಜಿನಿಂದ ನೀಡಲ್ಪಟ್ಟಿರುವ ಐಡಿ/ಆಧಾರ್ ಕಾರ್ಡ್/ಪಾನ್ ಕಾರ್ಡ್/ಡಿ.ಎಲ್/ವೋಟರ್ ಐಡಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಐಡಿ ಜೊತೆ, ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್ ಪೋರ್ಟ್ ಅಳತೆಯ ಫೋಟೋಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹಾಜರಾಗಬೇಕು.
ಬೆಳಗ್ಗೆ 11.00 ಗಂಟೆಯಿಂದ ಎನ್ ಟಿಎ ವತಿಯಿಂದ ನೇಮಿಸಿರುವ ಏಜೆನ್ಸಿಗಳಿಂದ ಸಂಬಂಧಪಟ್ಟ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು.
ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪೂರ್ಣ ತೋಳಿರುವ ಮೇಲಂಗಿ ಧರಿಸುವಂತಿಲ್ಲ, ದೊಡ್ಡ ಬಟನ್ಗಳಿರುವ ಶರ್ಟ್/ಪ್ಯಾಂಟ್/ಶೂ/ಸಾಕ್ಸ್/ಎತ್ತರದ ಚಪ್ಪಲಿಗಳನ್ನು ಹಾಕುವಂತಿಲ್ಲ. ಮಹಿಳಾ ವಿದ್ಯಾರ್ಥಿಗಳು ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ ಕ್ಲಿಪ್ ಹಾಗೂ ಇತರ ಯಾವುದೇ ಮೆಟಲ್ ಉಪಕರಣಗಳನ್ನು ಧರಿಸುವಂತಿಲ್ಲ. ಹಾಗೂ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ ಮತ್ತು ಧರಿಸುವಂತಿಲ್ಲ. ಪ್ರವೇಶಾತಿ ರಿಜಿಸ್ಟ್ರೇಷನ್ ಪ್ರಕ್ರಿಯೆ ಪೂರ್ಣಗೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಇರುವ ಕೊಠಡಿಗೆ ನೇರವಾಗಿ ತೆರಳಬಹುದು.
ಪರೀಕ್ಷೆಗೆ ಹಾಜರಾಗುವ ದಿವ್ಯಾಂಗರುವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವ್ಹೀಲ್ ಚೇರ್ ವ್ಯವಸ್ಥೆ ಹಾಗೂ ತುರ್ತು ಅಗ್ನಿಶಾಮಕ ವ್ಯವಸ್ಥೆಯನ್ನು ಜಿಲ್ಲಾಡಳಿತದ ವತಿಯಿಂದ ಮಾಡಲಾಗಿದೆ.
ಪಾಕ್ ಗಡಿಯಲ್ಲಿ 2 ದಿನ ಕಾದು ಮತ್ತೆ ಮೈಸೂರಿಗೆ ಮರಳಿದ ಮಹಿಳೆ..! ಮಕ್ಕಳಿಗೆ ಪಾಕ್ ಪೌರತ್ವ, ತಾಯಿಗೆ ಭಾರತದ ಪೌರತ್ವ..!
ಭಾರತದ ಗಡಿಯಲ್ಲಿ ಬೇಹುಗಾರಿಕೆ ಮಾಡುತ್ತಿದ್ದ ಪಾಕಿಸ್ತಾನಿ ಯೋಧ ವಶಕ್ಕೆ..! ಭಾರತದ ಗಡಿ ಭದ್ರತಾ ಪಡೆಯಿಂದ ಮಾಹಿತಿ
ಭಾರತ ಪಾಕಿಸ್ತಾನ ನಡುವೆ ಅಂಚೆ – ಪಾರ್ಸೆಲ್ ಸೇವೆಯೂ ಸ್ಥಗಿತ..! ಭಾರತೀಯ ಅಂಚೆ ಇಲಾಖೆಯಿಂದ ಆದೇಶ..!