Latestರಾಜ್ಯವೈರಲ್ ನ್ಯೂಸ್ಶಿಕ್ಷಣ

ಮೇ 4ರಂದು NEET ಪರೀಕ್ಷೆ, ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ ಕ್ಲಿಪ್ ಮತ್ತು ಯಾವುದೇ ಲೋಹದ ಉಪಕರಣಗಳನ್ನು ಧರಿಸುವಂತಿಲ್ಲ..!

1.2k

ನ್ಯೂಸ್ ನಾಟೌಟ್: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ ಟಿಎ) ವತಿಯಿಂದ 2025ನೇ ಸಾಲಿನ ನೀಟ್-ಯುಜಿ ಪರೀಕ್ಷೆ ಮೇ 4ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ರಾಜ್ಯದ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯ ಒಳಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಡಿಎಲ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿಯ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಪರೀಕ್ಷೆಗೆ ಹಾಜರಾಗಲು ತಿಳಿಸಲಾಗಿದೆ.

ಬೆಳಿಗ್ಗೆ 11 ಗಂಟೆಯಿಂದ ಎನ್‌ ಟಿಎ ವತಿಯಿಂದ ನೇಮಿಸಿರುವ ಏಜೆನ್ಸಿಗಳಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ನಿಯೋಜಿತ ಪೊಲೀಸ್ ಸಿಬ್ಬಂದಿ ವತಿಯಿಂದ ವಿದ್ಯಾರ್ಥಿಗಳ ಸುರಕ್ಷತಾ ತಪಾಸಣೆ ನಡೆಯಲಿದೆ. ‌

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳ ಅನ್ವಯ ಮಾರ್ಗಸೂಚಿಯನ್ನು ಪಾಲಿಸಲು ತಿಳಿಸಲಾಗಿದೆ.

ವಿದ್ಯಾರ್ಥಿಗಳು ಪೂರ್ಣ ತೋಳಿರುವ ಮೇಲಂಗಿ, ದೊಡ್ಡ ಬಟನ್ ಗಳಿರುವ ಶರ್ಟ್ , ಪ್ಯಾಂಟ್, ಶೂ, ಸಾಕ್ಸ್ , ಎತ್ತರದ ಚಪ್ಪಲಿಗಳು, ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ ಕ್ಲಿಪ್ ಹಾಗೂ ಇತರ ಯಾವುದೇ ಲೋಹದ ಉಪಕರಣಗಳನ್ನು ಧರಿಸುವಂತಿಲ್ಲ. ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ ಮತ್ತು ಧರಿಸುವಂತಿಲ್ಲ. ಪ್ರವೇಶಾತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಇರುವ ಕೊಠಡಿಗೆ ನೇರವಾಗಿ ತೆರಳಬೇಕು.

ಪರೀಕ್ಷಾ ಅವಧಿಯಲ್ಲಿ ಪ್ರತಿ ಗಂಟೆಗೊಂದು ಬಾರಿ ಬೆಲ್ ಮೂಲಕ ಸೂಚನೆ ನೀಡಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ವ್ಯವಸ್ಥೆ, ಆರೋಗ್ಯ ಸಿಬ್ಬಂದಿ ಹಾಗೂ ತುರ್ತು ಸೇವೆಗಳ ನಿಯೋಜನೆ, ಪರೀಕ್ಷಾ ಕೇಂದ್ರಗಳ ಸ್ವಚ್ಛತೆ ಮತ್ತು ಪರೀಕ್ಷೆಗೆ ಹಾಜರಾಗುವ ಅಂಗವಿಕಲರು, ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಿಲ್ ಚೇರ್ ವ್ಯವಸ್ಥೆ ಹಾಗೂ ತುರ್ತು ಆಗ್ನಿ ಶಾಮಕ ವ್ಯವಸ್ಥೆಯನ್ನು ಜಿಲ್ಲಾಡಳಿತದ ವತಿಯಿಂದ ಮಾಡಲಾಗುತ್ತದೆ.

ಪಾಕಿಸ್ತಾನ​ ಪ್ರಧಾನಿ ಆಸ್ಪತ್ರೆಗೆ ದಾಖಲು..! ಯುದ್ಧ ಭೀತಿಯ ನಡುವೆ ಶೆಹಬಾಜ್ ಷರೀಫ್ ​ಗೆ ಅನಾರೋಗ್ಯ..!

See also  ಗೃಹಲಕ್ಷ್ಮಿ ಯೋಜನೆಯ ಹಣ ಹಲವರಿಗೆ ಬಾರದೆ ಇರೋದಕ್ಕೆ ಸಚಿವೆ ಹೇಳಿದ್ದೇನು? ಹಣ ಬಿಡುಗಡೆ ತಡವಾಗುತ್ತಿರುವುದೇಕೆ?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget