ಕರಾವಳಿಸುಳ್ಯ

ನೆಲ್ಯಾಡಿ: ಕೃಷಿ ತೋಟಕ್ಕೆ ನುಗ್ಗಿ ಆನೆಗಳ ಉಪಟಳ,ರೈತರಿಗೆ ಅಪಾರ ನಷ್ಟ

ನ್ಯೂಸ್ ನಾಟೌಟ್ : ನೆಲ್ಯಾಡಿ ಸಮೀಪದ ಕುಂಡಡ್ಕ ಎಂಬಲ್ಲಿ ಕಾಡಾನೆಗಳು ಕೃಷಿ ಭೂಮಿಗೆ ಬಂದು ಅಟ್ಟಹಾಸ ಮೆರೆದಿದೆ.ಇದರಿಂದ ರೈತರು ಬೆಳೆದ ಕೃಷಿ ಭೂಮಿ ಸಂಪೂರ್ಣ ನಾಶವಾಗಿದೆ.ಇದರಿಂದ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ.

ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ನೆಲ್ಯಾಡಿ ಸಮೀಪದ ಕುಂಡಡ್ಕ ಎಂಬಲ್ಲಿಯ ಲಕ್ಷ್ಮೀನಾರಾಯಣ ಶೆಟ್ಟಿ, ಚಂದ್ರಹಾಸ ಶೆಟ್ಟಿ ಎಂಬವರ ಅಡಿಕೆ ತೋಟಕ್ಕೆ ಕಾಡಾನೆಗಳು ದಾಳಿ ಮಾಡಿವೆ. ಅಡಿಕೆ ಕೃಷಿ ಹಾಗೂ ಬಾಳೆ ಕೃಷಿಯನ್ನು ಧ್ವಂಸ ಮಾಡಿದ್ದು, ಇದರಿಂದಾಗಿ ಕೃಷಿಕರಿಗೆ ಅಪಾರ ನಷ್ಟ ಸಂಭವಿಸಿದೆ. ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿದ್ದು, ಈ ರೀತಿಯ ದಾಳಿಯಿಂದ ಕೃಷಿಕರಿಗೆ ತೊಂದರೆ ಉಂಟಾಗಿದೆ. ಸಂಬಂಧಪಟ್ಟ ಇಲಾಖೆಯವರು ಕೂಡಲೇ ಪರಿಶೀಲಿಸಿ, ಈ ಸಮಸ್ಯೆಯನ್ನು ಬಗೆಹರಿಸಬೇಕೆಂದು ರೈತರು ಆಗ್ರಹಿಸಿದ್ದಾರೆ.

Related posts

ಬಜರಂಗದಳದ ಸಂಯೋಜಕ ಅರೆಸ್ಟ್..! ಏನಿದು ಘಟನೆ..?

ಕಾಸರಗೋಡು: ವಿವಾಹ ನಿಶ್ಚಯಕ್ಕೆ ತೆರಳುತ್ತಿದ್ದ ಕುಟುಂಬದ ಕಾರಿಗೆ ಬೆಂಕಿ!

ಸುಳ್ಯ : ಎನ್ನೆಂಪಿಯುಸಿಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆ