ನ್ಯೂಸ್ ನಾಟೌಟ್: ಚಾಕುವಿನಿಂದ ಇರಿದು ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ(ಮೇ.9) ರಾತ್ರಿ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ.
ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ.
ಮನೆಯ ಅಂಗಳದಲ್ಲಿ ಶರತ್ ನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು, ಕೌಟುಂಬಿಕ ಕಲಹ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭಾರತ-ಪಾಕ್ ಘರ್ಷಣೆಯ ನಡುವೆ ಸ್ವತಂತ್ರ ದೇಶ ಎಂದು ಘೋಷಿಸಿಕೊಂಡ ಬಲೂಚ್..! ಮಾನ್ಯತೆಗಾಗಿ ವಿಶ್ವಸಂಸ್ಥೆಗೆ ಪತ್ರ..!