ಕರಾವಳಿರಾಜಕೀಯವೈರಲ್ ನ್ಯೂಸ್

ಪಕ್ಷದ ವಿರುದ್ಧ ಹೇಳಿಕೆ ಕೊಟ್ಟ 11 ಬಿಜೆಪಿ ನಾಯಕರಿಗೆ ನೋಟಿಸ್! ಬಹಿರಂಗ ಹೇಳಿಕೆ ನೀಡದಂತೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೂಚನೆ

ನ್ಯೂಸ್ ನಾಟೌಟ್ : ಈ ಹಿಂದೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಂತೆ ಕರ್ನಾಟಕ ಬಿಜೆಪಿ ನಾಯಕರ ಅಸಮಾಧಾನ ಹೆಚ್ಚಾದ ಬೆನ್ನಲ್ಲೇ ಎಚ್ಚೆತ್ತ ಪಕ್ಷ ಶಿಸ್ತು ಕ್ರಮದ ಮೂಲಕ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ. ಪಕ್ಷದ ವಿರುದ್ಧವೇ ಮಾತನಾಡಿರುವ 11 ನಾಯಕರಿಗೆ ಈಗಾಗಲೇ ನೊಟೀಸ್ ಜಾರಿ ಮಾಡಿದ್ದು, ಪಕ್ಷ ವಿರೋಧಿ ಹೇಳಿಕೆ ಕೊಡದಂತೆ ಇಂದು(ಜೂನ್ 30) ಬಿಜೆಪಿ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.

ಬಹಿರಂಗವಾಗಿಯೇ ಪಕ್ಷದ ನಾಯಕರ ವಿರುದ್ಧ ಹೇಳಿಕೆ ಕೊಟ್ಟಿರುವ ಶಾಸಕ ಬಸನಗೌಡ ಪಾಟೀಲ್ ಮತ್ತು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಸೇರಿದಂತೆ ಇತರೆ ನಾಯಕರಿಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿ ನೋಟಿಸ್ ಕೊಟ್ಟಿದೆ. ಇನ್ನು ಮುಂದೆ ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್ ನೀಡಿದ್ದು, ಒಂದು ವಾರದೊಳಗೆ ಲಿಖಿತವಾಗಿ ಉತ್ತರ ನೀಡಬೇಕೆಂದು ಕೇಳಿದೆ.

ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, “ಪಕ್ಷ ವಿರೋಧಿ ಹೇಳಿಕೆ ನೀಡಿರುವ 11 ಜನರಿಗೆ ನೋಟಿಸ್ ನೀಡಲಾಗಿದೆ. ಚುನಾವಣೆ ಸಂದರ್ಭದಲ್ಲಿ ಕೂಡ ಕೆಲವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಅಂತವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದರು.
ಪಕ್ಷದ ನಾಯಕರ ಬಗ್ಗೆ, ಪಕ್ಷದ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವವನ್ನು ಕರೆದು ಮಾತನಾಡುತ್ತೇವೆ. ಮುಂದೆ ಈ ರೀತಿ ಬಹಿರಂಗವಾಗಿ ಪಕ್ಷ ವಿರೋಧಿ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದೇವೆ. ಕಾಂಗ್ರೆಸ್‌ ಗ್ಯಾರಂಟಿಗಳ ಅನುಷ್ಠಾನ ಮಾಡುವಂತೆ ಆಗ್ರಹಿಸಿ ಹೋರಾಟ ಮಾಡಲಾಗುವುದು ಎಂದು ಕಟೀಲು ಹೇಳಿದರು.

ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಬಹಿರಂಗವಾಗಿಯೇ ಪಕ್ಷದ ನಾಯಕರ ವಿರುದ್ಧ ಮಾತನಾಡುತ್ತಿದ್ದು ಪಕ್ಷಕ್ಕೆ ಇರಿಸು ಮುರಿಸು ಉಂಟಾಗುವಂತೆ ಮಾತನಾಡಿದ್ದಾರೆ. ಕೆಎಸ್ ಈಶ್ವರಪ್ಪ ಕೂಡ ಆಪರೇಷನ್ ಕಮಲದಿಂದ ಪಕ್ಷದಲ್ಲಿ ಶಿಸ್ತು ಹಾಳಾಗಿದೆ ಎಂದು ಹೇಳಿದ್ದರು. ಪ್ರತಾಪ್ ಸಿಂಹ, ಸಿ.ಟಿ. ರವಿ ಹೊಂದಾಣಿಕೆ ರಾಜಕೀಯ ಬಿಜೆಪಿ ಪಾಳಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

Related posts

ನೆಲ್ಯಾಡಿ: ಕೃಷಿ ತೋಟಕ್ಕೆ ನುಗ್ಗಿ ಆನೆಗಳ ಉಪಟಳ,ರೈತರಿಗೆ ಅಪಾರ ನಷ್ಟ

ಪುತ್ತೂರು:ಸ್ನಾನ ಮಾಡಲೆಂದು ಹೊಳೆಗಿಳಿದ ಯುವಕ,ನೀರಲ್ಲಿಯೇ ಹೃದಯಾಘಾತಗೊಂಡು ಇನ್ನಿಲ್ಲ..!

ಕೋರ್ಟ್ ಗೆ ಕರೆದೊಯ್ಯುವಾಗ ಪೊಲೀಸರೇ ಕಳ್ಳರನ್ನು ಬಿಟ್ಟರಾ..?11 ಪೊಲೀಸರು ಅಮಾನತ್ತಾದ ರೋಚಕ ಸ್ಟೋರಿ ಇಲ್ಲಿದೆ, ವಿಡಿಯೋ ನೋಡಿ