ಕರಾವಳಿಜೀವನಶೈಲಿಮಹಿಳೆ-ಆರೋಗ್ಯ

77ನೇ ವರ್ಷದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜನೆ, ಆಸಕ್ತರು ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ

225

ನ್ಯೂಸ್ ನಾಟೌಟ್: ನಾಡಿನಾದ್ಯಂತ ಸಂಭ್ರಮದ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಎಲ್ಲ ತಯಾರಿಯೂ ನಡೆದಿದೆ.
ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ ಆಗಸ್ಟ್ 13ರಂದು ಗುತ್ತಿಗಾರಿನಲ್ಲಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ಮತ್ತು ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ) ಗುತ್ತಿಗಾರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ. ಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ. ಗ್ರಾಮ ಪಂಚಾಯತ್ ಗುತ್ತಿಗಾರು, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಲಯನ್ಸ್ ಕ್ಲಬ್ ಅರಿಯಡ್ಕ ಉಡುಪಿ ವಲಯ ಇವುಗಳ ಜಂಟಿ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಗುತ್ತಿಗಾರಿನ ಪಂಚಾಯತ್ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ರಕ್ತದಾನ ಮಾಡುವುದಕ್ಕೆ ಇಚ್ಚಿಸುವವರು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ
9480199711 ಮೊಬೈಲ್ ಸಂಖ್ಯೆಗೆ ಕರೆ ಮಾಡಿ.

See also  ಮರ್ಕಂಜ: ನಾಪತ್ತೆಯಾಗಿರುವ ವಿವಾಹಿತ ಮಹಿಳೆಗಾಗಿ ಬಾವಿಯೊಳಗೆ ಬಿದ್ದಿರುವ ಮಣ್ಣು ಅಗೆದು ಹುಡುಕಾಟ, ತರ್ಕಕ್ಕೆ ನಿಲುಕದ ಗೃಹಿಣಿಯ ನಿಗೂಢ ನಾಪತ್ತೆ ಪ್ರಕರಣ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget