ಕೊಡಗು

ಮಡಿಕೇರಿ:ರಾಜ್ಯದಲ್ಲಿ ಮತ್ತೆ ಕೊರೊನಾ ಅಬ್ಬರ ಭೀತಿ,60 ವರ್ಷ ತುಂಬಿದವರಿಗೆ ಮಾಸ್ಕ್ ಕಡ್ಡಾಯ: ಶೀಘ್ರ ಮಾರ್ಗಸೂಚಿ– ದಿನೇಶ್ ಗುಂಡೂರಾವ್

ನ್ಯೂಸ್ ನಾಟೌಟ್ : ರಾಜ್ಯದಲ್ಲಿ ಮತ್ತೆ ಕೊರೋನಾ ಅಬ್ಬರ ಜೋರಾಗಿದೆ.ಸಮೀಪದ ಕೇರಳದ ರಾಜ್ಯದಲ್ಲಂತು ಕೋರೋನಾ ರಣಕೇಕೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ.ಈ ಹಿನ್ನಲೆ ಇದೀಗ ಕಟ್ಟು ನಿಟ್ಟಿನ ನಿಯಮಗಳನ್ನು ರೂಪಿಸಲಾಗಿದೆ.ಚೆಕ್ ಪೋಸ್ಟ್‌ಗಳಲ್ಲಿ ಕೋವಿಡ್ ತಪಾಸಣೆ ಕೂಡ ಆರಂಭಗೊಂಡಿದೆ.

ಇದೀಗ 60 ವರ್ಷ ತುಂಬಿದವರು, ಹೃದಯ ಸಂಬಂಧಿ ಸಮಸ್ಯೆ, ಕೋವಿಡ್ ಲಕ್ಷಣ ಹೊಂದಿರುವವರು ಕಡ್ಡಾಯ ಮಾಸ್ಕ್‌ ಧರಿಸಬೇಕು ಎಂದು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಕುಶಾಲನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲೂ ಅಲರ್ಟ್‌ ಮಾಡಲಾಗಿದೆ.ಮುಖ್ಯವಾಗಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವೇನೂ ಇಲ್ಲ.ಆದರೆ ಎಚ್ಚರಿಕೆಯನ್ನು ಮರೆಯೋದು ಬೇಡ ಎಂದು ಹೇಳಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ ಎಂದಿದ್ದಾರೆ. 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿದವರು, ಉಸಿರಾಟದ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯಗೊಳಿಸುವಂತೆ ಸಮಿತಿಯವರು ಸಲಹೆ ನೀಡಿದ್ದಾರೆ. ಸಮಿತಿಯ ಸಲಹೆಗಳನ್ನ ಆಧರಿಸಿ ಆರೋಗ್ಯ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಕರೋನ ಲಕ್ಷಣ ಇದ್ದರೆ ಕಡ್ಡಾಯವಾಗಿ ಮಾಸ್ಕ್ ಧರಿಸಿ. ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಆಕ್ಸಿಜನ್ ಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೇರಳ ಗಡಿ ಜಿಲ್ಲೆಯಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ. ಶೀತ, ಜ್ವರ,ಕೆಮ್ಮು ಇರುವವರು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳುವುದು ಅನಿವಾರ್ಯ ಎಂದು ಕುಶಾಲನಗರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Related posts

ಜೋಶಿ ವಿರುದ್ಧದ ಕುಮಾರಸ್ವಾಮಿ ಟೀಕೆಗೆ ಬ್ರಾಹ್ಮಣ ಮಹಾಸಭಾ ಆಕ್ರೋಶ

ಸಂಪಾಜೆ: ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಮಡಿಕೇರಿ:ಬಿಜೆಪಿ ಕಾರ್ಯಕರ್ತರ ಸಭೆ , ಬಸ್ ವ್ಯವಸ್ಥೆ, ನೆಟ್‌ವರ್ಕ್ ಟವರ್ ಕಲ್ಪಿಸಲು ಒತ್ತಾಯ;ಹೊಸ ನೆಟ್ ವರ್ಕ್ ಟವರ್ ನಿರ್ಮಾಣದ ಭರವಸೆ ನೀಡಿದ ಸಂಸದ ಪ್ರತಾಪ್ ಸಿಂಹ