ನ್ಯೂಸ್ ನಾಟೌಟ್: ಡೆತ್ ನೋಟ್ ಬರೆದಿಟ್ಟು ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದ ಬೆಟಗೇರಿ ಶರಣ ಬಸವೇಶ್ವರ ನಗರದಲ್ಲಿ ನಡೆದಿದೆ.
ಪೂಜಾ ಅಮರೇಶ ಅಯ್ಯನಗೌಡರ್(27) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಪೂಜಾ, ಡೆತ್ ನೋಟ್ ಬರೆದಿಟ್ಟು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೂಜಾಗೆ ಅತ್ತೆ ಶಶಿಕಲಾ, ಬಾವ ವೀರನಗೌಡ ಹಾಗೂ ಮಾವ ನಿತ್ಯ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಆಕೆ ಸ್ವಲ್ಪ ಕಪ್ಪು ಇದ್ದುದರಿಂದ ಅತ್ತೆ ಅಪಹಾಸ್ಯ ಮಾಡುತ್ತಿದ್ದರು ಎಂದು ಪೂಜಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಅಲ್ಲದೇ ಅತ್ತೆ, ಮಾವ, ಬಾವ ಒಟ್ಟಾಗಿ ಆಕೆಯನ್ನು ನೇಣು ಹಾಕಿರುವುದಾಗಿ ಕುಟುಂಬಸ್ಥರು ಆರೋಪಿಸಿ, ಬಾವ ವೀರನಗೌಡನಿಗೆ ಥಳಿಸಿದ್ದಾರೆ. ಸ್ಥಳದಲ್ಲಿ ಯುವತಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪೂಜಾ, 4 ತಿಂಗಳ ಹಿಂದೆಯಷ್ಟೇ ಅಮರೇಶ ಎಂಬುವವರನ್ನು ಮದುವೆಯಾಗಿದ್ದರು. ಪತಿ ಅಮರೇಶ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಸೋಮವಾರವಷ್ಟೇ ಚೆನ್ನೈಗೆ ಕೆಲಸಕ್ಕೆ ತೆರಳಿದ್ದರು. ಸ್ಥಳಕ್ಕೆ ಬೆಟಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಡ್ಜ್ ಮನೆಯಲ್ಲೇ 8 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ತಂದೆ, ಮಗ..! ಮಹಾರಾಷ್ಟ್ರದಿಂದ ರೈಲಿನಲ್ಲಿ ಬಂದಿದ್ದ ಖದೀಮರು..!