ಕ್ರೈಂವೈರಲ್ ನ್ಯೂಸ್

ದಲಿತ ಮಹಿಳೆಗೆ ಮೂತ್ರ ಕುಡಿಸಿದ ದುಷ್ಕರ್ಮಿಗಳು..! ಬಲವಂತವಾಗಿ ಆಕೆಯನ್ನು ತಮ್ಮ ಮನೆಗೆ ಒಯ್ದದ್ದೇಕೆ ಅಪ್ಪ-ಮಗ? ಏನಿದು ದ್ವೇಷದ ಕಥೆ?

265

ನ್ಯೂಸ್ ನಾಟೌಟ್: ತಂದೆ-ಮಗ ದಲಿತ ಮಹಿಳೆ ಸಾಲ ವಾಪಸ್ ಪಡೆದು ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟಿದ್ದು, ಮಹಿಳೆ ಹಣ ಕೊಡಲು ನಿರಾಕರಿಸಿದ ಬಳಿಕ ಆಕೆಯನ್ನು ವಿವಸ್ತ್ರಗೊಳಿಸಿ, ಅಮಾನುಷವಾಗಿ ನಡೆದುಕೊಂಡು ಮೂತ್ರ ಕುಡಿಸಿದ ಘಟನೆ ಬಿಹಾರದ ಪಾಟ್ನಾದಲ್ಲಿ ವರದಿಯಾಗಿದೆ.

ಘಟನೆಯಿಂದ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಮಹಿಳೆಯ ತಲೆಗೆ ಗಂಭೀರ ಗಾ* ಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗಳಾದ ಪ್ರಮೋದ್ ಸಿಂಗ್ ಮತ್ತು ಆತನ ಮಗ ಅಂಶು ಮತ್ತು ಇತರ ನಾಲ್ವರು ಶನಿವಾರ ರಾತ್ರಿ 10 ಗಂಟೆಯ ಸುಮಾರಿಗೆ ದಲಿತ ಮಹಿಳೆಯ ಮನೆಗೆ ನುಗ್ಗಿ ಬಲವಂತವಾಗಿ ಆಕೆಯನ್ನು ತಮ್ಮ ಮನೆಗೆ ಒಯ್ದಿದ್ದಾರೆ.

ಬಳಿಕ ಆಕೆಯ ಮೇಲೆ ಹ* ಲ್ಲೆ ನಡೆಸಿ, ವಿ* ವಸ್ತ್ರಗೊಳಿಸಿದ್ದು, ಕೋಲಿನಿಂದ ಹೊಡೆದಿದ್ದಾರೆ. ಬಳಿಕ ಪ್ರಮೋದ್ ಸಿಂಗ್ ತನ್ನ ಮಗನಿಗೆ ಮಹಿಳೆಯ ಬಾಯಿಗೆ ಮೂತ್ರ ವಿಸರ್ಜನೆ ಮಾಡುವಂತೆ ಸೂಚಿಸಿದ್ದಾನೆ. ನಂತರ ಸಂತ್ರಸ್ತೆ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ತನ್ನ ಮನೆಗೆ ಮರಳಿದ್ದಾಳೆ.

ದಲಿತ ಮಹಿಳೆ ಕೆಲ ತಿಂಗಳ ಹಿಂದೆ ಪ್ರಮೋದ್ ಸಿಂಗ್‌ನಿಂದ ಬಡ್ಡಿಗೆ 1,500 ರೂ. ಸಾಲ (Loan) ಪಡೆದಿದ್ದು, ಬಡ್ಡಿ ಸಮೇತ ಹಣವನ್ನು ಮರುಪಾವತಿ ಮಾಡಿದ್ದಳು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇದಾಗಿಯೂ ಆರೋಪಿ ಆಕೆಯಿಂದ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದು, ಅದನ್ನು ನೀಡಲು ಮಹಿಳೆ ನಿರಾಕರಿಸಿದ್ದಾಳೆ. ಹೆಚ್ಚಿನ ಹಣ ನೀಡದಿದ್ದರೇ ಮಹಿಳೆಯನ್ನು ವಿವಸ್ತ್ರ ಮಾಡಿ ಊರೂರು ಅಲೆಯುವಂತೆ ಮಾಡುವುದಾಗಿ ಪ್ರಮೋದ್ ಮಹಿಳೆಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

See also  ಆಟವಾಡುತ್ತಿದ್ದ ಮಕ್ಕಳ ಮೇಲೆ ಉರುಳಿ ಬಿದ್ದ ಬೃಹತ್ ಬಂಡೆ..! ಅಸಹಾಯಕರಾಗಿ ಕೂಗಾಡಿದ ಪೋಷಕರು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget