ನ್ಯೂಸ್ ನಾಟೌಟ್: ಕಡಬ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಹಿಂದೂ ಸಂಘಟನೆಗಳ ಮುಖಂಡರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ವರಿಷ್ಠಾಧಿಕಾರಿಯ ಸೂಚನೆಯಂತೆ ಕಡಬ ಪೊಲೀಸರು ರಾತ್ರಿ ವೇಳೆ ಸಂಘಟನೆಯ ಪ್ರಮುಖರ ಮನೆಗಳಿಗೆ ತೆರಳಿ ಜಿಪಿಎಸ್ ಆಧಾರಿತ ಫೋಟೊ ತೆಗೆದುಕೊಂಡಿದ್ದರು ಮತ್ತು ಸಂಘಟನೆಗಳ ಪ್ರಮುಖರ ಮನೆಗಳಿಗೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿರುವುದನ್ನು ವಿರೋಧಿಸಿ, ಹಿಂದೂ ಸಂಘಟನೆಯ ಕಾರ್ಯಕರ್ತರು ಕಡಬ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಪೂರ್ವಾನುಮತಿ ಪಡೆಯದೆ ಕಡಬ ಠಾಣೆಯ ಮುಂಭಾಗದಲ್ಲಿ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ. ಅದರಂತೆ ಒಟ್ಟು 15 ಮಂದಿಯ ವಿರುದ್ದ ಕಡಬ ಪೊಲೀಸರು ಠಾಣೆಯಲ್ಲಿ ಅ.ಕ್ರ: 39/2025 ಕಲಂ: 189(2),190 BNS-2023 ಸೆಕ್ಷನ್ ಗಳಂತೆ ಪ್ರಕರಣ ದಾಖಲಿಸಿದ್ದಾರೆ.