ಶಿಕ್ಷಣಸುಳ್ಯ

NMPUC ಯಲ್ಲಿ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನ ವಿತರಣೆ, ಮುಖ್ಯ ಅತಿಥಿಯಾಗಿ ಹಿರಿಯ ವಿದ್ಯಾರ್ಥಿನಿ ಭಾಗಿ

138

ನ್ಯೂಸ್ ನಾಟೌಟ್: ಸುಳ್ಯದ (NMPUC) ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ ಡಿ.9 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಆಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಮಿಥಾಲಿ ಪಿ ರೈ ವಹಿಸಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಸಿ.ಎ(ಚಾರ್ಟೆಡ್ ಅಕೌಂಟೆಂಟ್) ಮಮತಾ ಪಿ ಡಿ ಭಾಗವಹಿಸಿ ಮಾತನಾಡಿ ಕಾಲೇಜಿನ ದಿನಗಳನ್ನು ನೆನಪಿಸಿಕೊಳ್ಳುವುದರೊಂದಿಗೆ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸಾಧಿಸಲು ಗುರಿ, ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನದೊಂದಿಗೆ ಜ್ಞಾನ ಸಂಪಾದನೆ ಅತ್ಯಗತ್ಯ ಎಂದು ಸ್ಫೂರ್ತಿದಾಯಕ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳ ನೆಲೆಯಲ್ಲಿ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ ರುದ್ರಕುಮಾರ್ ಎಂ. ಎಂ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿನಯ್ ನಿಡ್ಯಮಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಅಮೃತ ಹಾಗೂ ಬಳಗ ಪ್ರಾರ್ಥಿಸಿದರು, ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಸಾವಿತ್ರಿ ಕೆ ಸ್ವಾಗತಿಸಿದರು, ಉಪನ್ಯಾಸಕರಾದ ಬೇಬಿ ವಿದ್ಯಾ ಪಿ.ಬಿ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ನಾಯಕ ಸುಶಾಂತ್ ವಂದನಾರ್ಪಣೆಗೈದರು. ವಿದ್ಯಾರ್ಥಿನಿಯರಾದ ಆಯಿಷತ್ ಅಸ್ನ ಹಾಗೂ ಭೂಮಿಕ ಬಿ ಪಿ ಕಾರ್ಯಕ್ರಮ ನಿರೂಪಿಸಿದರು. ಬಹುಮಾನ ವಿಜೇತರ ಪಟ್ಟಿಯನ್ನು ಉಪನ್ಯಾಸಕರಾದ ಹರ್ಷಿತ, ಉಮಾಶ್ರೀ, ರಾಧಿಕಾ, ವಿನುತ ಹಾಗೂ ವಿನಯ್ ನಿಡ್ಯಮಲೆ ವಾಚಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Click

https://newsnotout.com/2024/12/uppinangady-nekkilady-kannada-news-ambulance-hits-home-ground/
https://newsnotout.com/2024/12/toilet-issue-kannada-news-rented-people-9-dna-test-viral-news/
https://newsnotout.com/2024/12/kananda-news-bomb-viral-news-viral-news-police/
https://newsnotout.com/2024/12/kannada-news-bus-viral-news-belagavi-viral-news-s/
https://newsnotout.com/2024/12/monkey-kannada-news-viral-news-railway-monkey/
See also  ಮಾರ್ಚ್ 9ರಿಂದ 29 ರವರೆಗೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget