ನ್ಯೂಸ್ ನಾಟೌಟ್: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರೆ ಹತ್ಯೆಯ ಪ್ರಕರಣದಲ್ಲಿ ಯತೀಶ್ ಅನ್ನುವ ವ್ಯಕ್ತಿಯನ್ನು ಬೆಳ್ಳಾರೆಯಿಂದ ಬಂಧಿಸಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಸ್ಪಷ್ಟಪಡಿಸಿದ್ದಾರೆ. ಸದ್ಯ ಪೊಲೀಸರು ಪ್ರವೀಣ್ ಹತ್ಯೆಗೆ ಸಂಬಂಧಪಟ್ಟಂತೆ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಆದರೆ ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.
previous post
next post