Uncategorized

ಕೇಸರಿ ಶಾಲು, ಹಿಜಾಬ್ ಧರಿಸಲು ಇಲ್ಲ ಅವಕಾಶ: ಕರ್ನಾಟಕ ಸರ್ಕಾರದಿಂದ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ಕರ್ನಾಟಕದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನೇ ಪಾಲಿಸಬೇಕು. ಹಿಜಾಬ್ (Hijab) ಅಥವಾ ಕೇಸರಿ ಶಾಲು (Saffron Shawl) ಧರಿಸಿ ಶಾಲಾ ಕಾಲೇಜುಗಳಿಗೆ ಬರಲು ಯಾರಿಗೂ ಅವಕಾಶ ನೀಡುವುದಿಲ್ಲ. ಕುರಿತು ಕರ್ನಾಟಕ ಶಿಕ್ಷಣ ಕಾಯ್ದೆಯ ಅನ್ವಯ ಸುತ್ತೋಲೆ ಪ್ರಕಟಿಸಿದ್ದೇವೆ ಎಂದು ಶಿಕ್ಷಣ ಸಚಿವ  ಬಿ.ಸಿ.ನಾಗೇಶ್ (BC Nagesh) ಸ್ಪಷ್ಟಪಡಿಸಿದ್ದಾರೆ. ಹೈಕೋರ್ಟ್ತೀರ್ಪು ಬರುವವರೆಗೆ ಸಂಹಿತೆ ಪಾಲಿಸಬೇಕು. ಹಿಜಾಬ್ ಗೊಂದಲ ಶೀಘ್ರ ಪರಿಹಾರವಾಗಬೇಕು. ಮಕ್ಕಳ ಭವಿಷ್ಯಕ್ಕೆ ಇದರಿಂದ ತೊಡಕಾಗಬಾರದು. ಹೈಕೋರ್ಟ್ ಅಂತಿಮ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಬೇಕಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೇ ಯಥಾಸ್ಥಿತಿ ಕಾಪಾಡಬೇಕು ಎಂದು ವಕ್ಫ್ಬೋರ್ಡ್ ಅಧ್ಯಕ್ಷ ಶಫಿ ಸಅದಿ ಹೇಳಿದರು.

ಕರಾವಳಿ ಮತ್ತು ಮಲೆನಾಡಿನ ಕೆಲ ಸರ್ಕಾರಿ ಕಾಲೇಜುಗಳಲ್ಲಿ ಉದ್ಘವಿಸಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಕುರಿತು ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ವಕ್ಫ್​ ಬೋರ್ಡ್ ಅಧ್ಯಕ್ಷ ಶಫಿ ಸಅದಿ, ಕರ್ನಾಟಕ ಶಿಕ್ಷಣ ಕಾಯ್ದೆಯನ್ವಯ ಪ್ರಕಟಿಸಿರುವ ಸುತ್ತೋಲೆಯನ್ನು ಎಲ್ಲರೂ ಗೌರವಿಸಬೇಕು. ರಾಜ್ಯದ ಹಲವೆಡೆಯಿಂದ ಸಮಾಜದವರು (ಮುಸ್ಲಿಮರು) ಕರೆ ಮಾಡಿ, ಹಿಜಾಬ್ ಧರಿಸಿದರೆ ಕಾಲೇಜಿಗೆ ಬಿಡುತ್ತಿಲ್ಲವೆಂದು ಹೇಳಿದ್ದಾರೆ. ಶೈಕ್ಷಣಿಕವಾಗಿ ನಮ್ಮ ಸಮುದಾಯ ಬಹಳ ಹಿಂದುಳಿದಿದೆ. ಹಿಜಾಬ್​ ವಿಚಾರ ರಾಜ್ಯದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಇದಕ್ಕೆ ಬ್ರೇಕ್ ಹಾಕದಿದ್ದರೆ ಶಿಕ್ಷಣ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರಬಹುದು ಎಂದರು.

Related posts

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಪೂಜ್ಯ ಕೆ.ವಿ.ಜಿಯವರ ಪುಣ್ಯಸ್ಮರಣೆ, ಗಣ್ಯರಿಂದ ಪುಷ್ಪಾರ್ಚನೆ

ಲೈವ್‌ ನಲ್ಲಿ ಕಣ್ಣೀರಿಟ್ಟು ಸಾಕ್ಷಿ ಸಮೇತ ರಾಜಕಾರಣಿಯ ʼಕಾಮದಾಟʼದ ರಹಸ್ಯ ಬಿಚ್ಚಿಟ್ಟ ನಟಿ..! ಇಲ್ಲಿದೆ ವಿಡಿಯೋ

ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆಗೈದ ಪತಿ