Latest

ಚಿಕ್ಕಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ!! ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಇನ್ಮುಂದೆ ಇರಲ್ಲ!?

520
Spread the love

ನ್ಯೂಸ್‌ ನಾಟೌಟ್ : ಮಕ್ಕಳ ಆರೋಗ್ಯಕ್ಕೆ ಒಳ್ಳೆಯದು ಅಂತ ಹೇಳಿ ಶಾಲಾ ಮಕ್ಕಳಿಗೆ ಚಿಕ್ಕಿಯನ್ನು ನೀಡಲಾಗುತ್ತಿತ್ತು,ಅದಕ್ಕು ಈಗ ಕಂಟಕ ಎದುರಾಗಿದೆ.ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿತರಣೆ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

1 ರಿಂದ 10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ರೂಪದಲ್ಲಿ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಈ ಅಂಶಗಳು ಪತ್ತೆಯಾದ ಹಿನ್ನಲೆ ಈ ನಿರ್ಧಾರ ತೆಗೆದು ಕೊಳ್ಳಲಾಗಿದೆ. ಅಪರ್ಯಾಪ್ತ ಕೊಬ್ಬಿನಾಂಶ (ಅನ್‌ಸ್ಯಾಚುರೇಟೆಡ್ ಫ್ಯಾಟ್) ಹೆಚ್ಚಿಗೆ ಇದ್ದು, ಇದರಲ್ಲಿ ಸಕ್ಕರೆ ಅಂಶ ಕೂಡ ಅಧಿಕವಾಗಿದೆ. ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದೇ ಇದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಇರುವುದರಿಂದ ವಿತರಣೆ ಸ್ಥಗಿತಗೊಳಿಸಿ, ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಚಿಕ್ಕಿ ವಿತರಣೆ ಸ್ಥಗಿತಗೊಳಿಸಿ ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸುವಂತೆ ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ಹಾಗೂ ಧಾರವಾಡ ಅಪರ ಆಯುಕ್ತರು ಕೋರಿದ್ದರು. ಇದೇ ರೀತಿಯ ಆಗ್ರಹ ಇನ್ನೂ ಕೆಲ ಜಿಲ್ಲೆಗಳಿಂದಲೂ ವ್ಯಕ್ತವಾಗಿತ್ತು ಈ ಹಿನ್ನೆಲೆಯಲ್ಲಿ ಸರ್ಕಾರ ಈ ಆದೇಶ ಹೊರಡಿಸಿದೆ.ಶಾಲೆಯಲ್ಲಿ ಮೊಟ್ಟೆ ತಿನ್ನದ ಮಕ್ಕಳಿಗೆ ಚಿಕ್ಕಿ ಅಥವಾ ಬಾಳೆಹಣ್ಣು ನೀಡಲಾಗುತ್ತಿತ್ತು.ಬಹುತೇಕ ಶಾಲೆಗಳಲ್ಲಿ ಚಿಕ್ಕಿಯ ಗಾತ್ರ ಒಂದೇ ತೆರನಾಗಿ ಇಲ್ಲದಿರುವುದು, ಅವಧಿ ಮೀರಿದ ಸಂಗ್ರಹ ಮತ್ತಿತರ ಕಾರಣಗಳಿಂದಲೂ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಹಾಗಾಗಿ, ಚಿಕ್ಕಿ ವಿತರಣೆ ಮಾಡಬಾರದು ಎಂದು ಇಲಾಖೆ ಸೂಚಿಸಿದೆ.

See also  ಪತ್ನಿ ಕಾಟದಿಂದ ಬೇಸತ್ತು ಐಟಿ ಮ್ಯಾನೇಜರ್ ಲೈವ್ ಆತ್ಮಹತ್ಯೆ..! ಆತ ವಿಡಿಯೋದಲ್ಲಿ ಹೇಳಿದ್ದೇನು..?
  Ad Widget   Ad Widget   Ad Widget   Ad Widget