ರಾಜಕೀಯ

ಜೆಡಿಎಸ್‌ನಲ್ಲಿ ಬಿರುಕು, ಟಿಕೇಟ್‌ಗಾಗಿ ಅಣ್ಣ -ತಮ್ಮನ ಕಿತ್ತಾಟ?

ನ್ಯೂಸ್ ನಾಟೌಟ್: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷದಲ್ಲಿ ತಲ್ಲಣ ಶುರುವಾಗಿದೆ. ಇದೀಗ ದೊಡ್ಡ ಗೌಡರು ಕಟ್ಟಿದ ಕನಸಿನ ಪಕ್ಷ ಮಕ್ಕಳ ಕಿತ್ತಾಟದಿಂದ ಗಡಗಡ ನಡುಗುತ್ತಿದೆ ಎಂದು ಜಾಲತಾಣದಲ್ಲಿ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಮಾಜಿ ಸಿಎಂ ಕುಮಾರ ಸ್ವಾಮಿ ಹಾಗೂ ಶಾಸಕ ಎಚ್‌.ಡಿ ರೇವಣ್ಣಗೆ ಒಬ್ಬರನ್ನು ಕಂಡರೆ ಒಬ್ಬರಿಗೂ ಆಗುವುದಿಲ್ಲ ಎನ್ನುವ ವಿಚಾರ ಜೆಡಿಎಸ್‌ ಪಕ್ಷದ ಮೂಲಗಳಿಂದ ಬಂದಿದೆ. ಪಕ್ಷದ ಟಿಕೇಟ್ ನೀಡುವ ವಿಚಾರದಲ್ಲಿ ಪಕ್ಷದೊಳಗೆ ಅಸಮಾಧಾನ ಎದ್ದಿದೆ ಎನ್ನಲಾಗಿದೆ.

ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ, ಯಾರು ಏನೇ ಹೇಳಿದರೂ ನನ್ನ ಮತ್ತು ಕುಮಾರಸ್ವಾಮಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಸೃಷ್ಟಿ ಮಾಡಲು ಸಾಧ್ಯವಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ. ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಹಾಸನ ಕ್ಷೇತ್ರದಲ್ಲಿ ಸ್ಪರ್ಧಿಸಲು ಭವಾನಿ ರೇವಣ್ಣ ಹೆಸರನ್ನು ಮುನ್ನೆಲೆಗೆ ತಂದವರು ನಾವಲ್ಲ, ಕಾರ್ಯಕರ್ತರು. ಅದು ಅವರ ಅಭಿಮಾನ. ಟಿಕೆಟ್ ವಿಷಯದಲ್ಲಿ ಯಾವುದೇ ನಿರ್ಧಾರ ಆಗಿಲ್ಲ‘ ಎಂದರು. ಹಾಸನ ಕ್ಷೇತ್ರದ ಜೆಡಿಎಸ್ ಪಕ್ಷದ ಟಿಕೆಟ್ ವಿಷಯದಲ್ಲಿ ಇತ್ತೀಚಿನ ಬೆಳವಣಿಗೆಗಳಿಂದ ಜನರಲ್ಲಿ ಗೊಂದಲ ಸೃಷ್ಟಿಯಾಗಿದೆ. ಭವಾನಿ ರೇವಣ್ಣ ಅವರಿಗೆ ಸೂರಜ್, ಪ್ರಜ್ವಲ್ ಟಿಕೆಟ್ ಕೊಡಿಸಲು ಸಾಧ್ಯ ಇಲ್ಲ. ಪಕ್ಷದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ, ಎಚ್‌.ಡಿ. ದೇವೇಗೌಡರು, ಎಚ್.ಡಿ. ಕುಮಾರಸ್ವಾಮಿ, ನಾನು, ಜಿಲ್ಲೆಯ ಶಾಸಕರು ಸೇರಿ ಹಾಸನ ಸೇರಿದಂತೆ ಏಳು ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ಮಾಡುತ್ತೇವೆ. ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಅವರನ್ನು ಗೆಲ್ಲಿಸುವುದು ಕಾರ್ಯಕರ್ತರ ಕರ್ತವ್ಯ’ ಎಂದರು. ಕುಮಾರಸ್ವಾಮಿ ಆಡಳಿತದಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನು ಕಂಡಿರುವ ಜನ, ಈ ಬಾರಿ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕಾರ ನೀಡುತ್ತಾರೆ ಎನ್ನುವ ವಿಶ್ವಾಸ ಇದೆ‘ ಎಂದರು.

Related posts

ಬಾಲರಾಮನ ಪ್ರತಿಷ್ಠೆಯಂದೇ ರಾಮಮಂದಿರ ಉದ್ಘಾಟಿಸಿದ ಸಿದ್ದರಾಮಯ್ಯ..! ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ ಸಿಎಂ

ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ ಕೂಗಿದ ನಾಲ್ವರು ಪೊಲೀಸ್‌ ವಶಕ್ಕೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಸುಳ್ಯ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಬೀದಿಗಿಳಿದು ಬಿಜೆಪಿ ಹೋರಾಟ, ಸಿಎಂ ಸಿದ್ದು ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ‘ನ್ಯಾನೋ’ ಕಾರಿಗೆ ಹಗ್ಗ ಕಟ್ಟಿ ಎಳೆದು ಆಕ್ರೋಶ