ಮಂಗಳೂರುರಾಜಕೀಯ

ಸುಳ್ಯ:ದ.ಕ. ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್ ಆರ್ ಮಾ.30ಕ್ಕೆ ಸುಳ್ಯ ಭೇಟಿ; ಆ ದಿನದ ಕಾರ್ಯಕ್ರಮಗಳ ವಿವರ ಇಲ್ಲಿದೆ ಓದಿ..

211

ನ್ಯೂಸ್‌ ನಾಟೌಟ್‌ : ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ರವರು ಮಾ.೩೦ರಂದು ಸುಳ್ಯಕ್ಕೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಸುಳ್ಯ ಸೆಂಟರ್ ನಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಪಿ.ಸಿ.ಜಯರಾಮ್ ಮಾಹಿತಿ ನೀಡಿದ್ದಾರೆ.

ಇಂದು (ಮಾ.28ರಂದು) ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಕಾರ‍್ಯಕ್ರಮದ ಬಗೆಗಿನ ವಿವರ ನೀಡಿದರು.ಕಾಂಗ್ರೆಸ್‌ ಅಭ್ಯರ್ಥಿ ವಿದ್ಯಾವಂತರು, ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದಾರೆ. ಮಾಜಿ ಸಚಿವ ಜನಾರ್ಧನ ಪೂಜಾರಿಯವರ ಶಿಷ್ಯ. ಮಾತ್ರವಲ್ಲ ಬೆಳದಿಂಗಳು ಚಾರಿಟೇಬಲ್ ಟ್ರಸ್ಟ್‌ ಮೂಲಕ ಸಮಾಜ ಸೇವೆಯಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಂಡವರು ಎಂದು ಹೇಳಿದರು.

ಮಾ.30ರಂದು ಬೆಳಗ್ಗೆ 8 ಗಂಟೆಗೆ ಸುಳ್ಯಕ್ಕೆ ಬರುವ ಇವರು ಸುಳ್ಯದ ಚೆನ್ನಕೇಶವ ದೇವಸ್ಥಾನ, ಕಲ್ಕುಡ ದೈವಸ್ಥಾನ, ಮೊಗರ್ಪಣೆ ಮಸೀದಿ, ಸುಳ್ಯ ಸೈಂಟ್ ಬ್ರಿಜಿಡ್ಸ್ ಚರ್ಚ್ ಹಾಗೂ ಕೆ.ವಿ.ಜಿ. ವಿದ್ಯಾಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ. ಪೂ.11 ಗಂಟೆಗೆ ಸುಳ್ಯ ಸೆಂಟರ್ ನಲ್ಲಿ ಕಾಂಗ್ರೆಸ್‌ ಚುನಾವಣಾ ಕಚೇರಿ ಉದ್ಘಾಟನೆ ನಡೆಯಲಿದ್ದು, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಚುನಾವಣಾ ಉಸ್ತುವಾರಿ ರಮಾನಾಥ ರೈ, ಕೆಪಿಸಿಸಿ ಕಾರ‍್ಯಾಧ್ಯಕ್ಷ ಮಂಜುನಾಥ ಭಂಡಾರಿ ಆಗಮಿಸಲಿದ್ದಾರೆ ಎಂದವರು ಹೇಳಿದರು.

ಲೋಕಸಭಾ ಚುನಾವಣಾ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಎನ್.ಜಯಪ್ರಕಾಶ್ ರೈ ಮಾತನಾಡಿ, “ಚುನಾವಣೆಗೆ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ. ಕಾರ್ನಾರ್ ಸಭೆಗಳು, ಜಿ.ಪಂ. ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲಸ ಕಾರ‍್ಯಗಳು ಆರಂಭವಾಗಿದೆ. ಎ.೩ರಂದು ನಮ್ಮ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ. ಅಂದಿನಿಂದ ಪ್ರಚಾರ ಕಾರ‍್ಯಕ್ಕೆ ವೇಗ ಸಿಗಲಿದೆ” ಎಂದು ಹೇಳಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಭರತ್‌ ಮುಂಡೋಡಿ ಮಾತನಾಡಿ “ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನುಡಿದಂತೆ ನಡೆದುಕೊಂಡಿದೆ. ಸರಕಾರದ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ನೀಡಲಿದೆ. ಸರಕಾರದ ೫ ಗ್ಯಾರಂಟಿ ಯೋಜನೆಗಳು ಕೂಡಾ ಮಧ್ಯವರ್ತಿಗಳಿಲ್ಲದೆ ನೇರವಾಗಿ ಫಲಾನುಭವಿಗಳ ಖಾತೆಗೆ ಬೀಳುತ್ತಿದೆ. ಆ ಮೂಲಕ ಕಾಂಗ್ರೆಸ್ ಜನರಿಗೆ ಬದುಕು ಕೊಟ್ಟಿದೆ. ಬದುಕು ಕೊಟ್ಟಿರುವ ಕಾಂಗ್ರೆಸ್‌ ಪಕ್ಷಕ್ಕೆ ಜನ ಮತ ಕೊಡುತ್ತಾರೆ” ಎಂದು ಅವರು ಹೇಳಿದರು.

ಈ ವೇಳೆ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕೃಷ್ಣಪ್ಪ ಜಿ, ಸುಳ್ಯಬ್ಲಾಕ್ ಉಸ್ತುವಾರಿ ಸರ್ವೋತ್ತಮ ಗೌಡ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಗೀತಾ ಕೋಲ್ಚಾರ್, ಕೆಪಿಸಿಸಿ ಅಲ್ಪ ಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿ ಕೆ.ಎಂ.ಮುಸ್ತಫಾ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ್, ಪ್ರಮುಖರಾದ ಸರಸ್ವತಿ ಕಾಮತ್, ರಾಧಾಕೃಷ್ಣ ಬೊಳ್ಳೂರು, ಎಸ್.ಸಂಶುದ್ಧೀನ್, ರಂಜಿತ್ ರೈ ಮೇನಾಲ, ಶಾಫಿ ಕುತ್ತಮೊಟ್ಟೆ, ರಾಜು ಪಂಡಿತ್, ಪ್ರವೀಣ ಮರುವಂಜ, ಸುಜಯ ಕೃಷ್ಣ, ಕುಶಾಲಪ್ಪ ನೆಲ್ಯಾಡಿ, ದೀಕ್ಷಿತ್ ನೆಲ್ಯಾಡಿ, ಜಗದೀಶ್ ಉಪಸ್ಥಿತರಿದ್ದರು.

  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget