ಕ್ರೈಂ

ನೋಟ್ಸ್ ನೀಡಲು ಮನೆಗೆ ಬಂದಿದ್ದ ಬಾಲಕಿ ಮೇಲೆ ಎರಗಿದ ಕಾಮುಕ

1k

ತುಮಕೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಬೆದರಿಕೆ ಹಾಕಿದ್ದ ಆರೋಪ ಕೇಳಿ ಬಂದಿದ್ದು ಆರೋಪಿ ಅಸ್ಲಾಂನನ್ನು ಕೊರಟಗೆರೆ ಪೊಲೀಸರು ಬಂಧಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.

ಕೊರಟಗೆರೆ ಪಟ್ಟಣದ ಖಾಸಗಿ ಶಾಲೆಯಲ್ಲಿ 8 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಗೆಳತಿಯ ಮನೆಗೆ ನೋಟ್ಸ್ ನೀಡಲು ಬಂದಿದ್ದಳು. ಈ ವೇಳೆ ಅಪ್ರಾಪ್ತ ಬಾಲಕಿ ಮೇಲೆ ಆರೋಪಿ ಮೃಗನಂತೆ ಎರಗಿದ್ದಾನೆ. ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ಕುಡಿಯುವ ನೀರಿಗೆ ಪ್ರಜ್ಞೆ ತಪ್ಪುವ ಔಷಧ ಬೇರಿಸಿ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಜೊತೆಗೆ ಆರೋಪಿ ಅತ್ಯಾಚಾರ ಮಾಡಿ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗುತ್ತಿದೆ. ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗೆ ಮುಂದಾಗಿದ್ದ ವೇಳೆ ಅಪ್ರಾಪ್ತೆ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.

ಸದ್ಯ ಘಟನೆ ಸಂಬಂಧ ಕೊರಟಗೆರೆ ಪಟ್ಟಣದ ಅಸ್ಲಾಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

See also  ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು..! 10 ಲಕ್ಷಕ್ಕೆ 'ಸೆಟಲ್ ಮೆಂಟ್' ಆರೋಪ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget