ಕ್ರೈಂ

ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

584
Spread the love

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಹಾಸ್ಟೇಲ್ ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಅ. 6 ಬುಧವಾರ ಘಟನೆ ವರದಿಯಾಗಿದೆ. ಮೃತರನ್ನು ಕೇರಳ ಮೂಲದ ನೀನಾ (19) ಎಂದು ಗುರುತಿಸಲಾಗಿದೆ. ಇವರು 2020-21 ಬ್ಯಾಚ್ ನ ವಿದ್ಯಾರ್ಥಿಯಾಗಿದ್ದು, ನಗರದ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ಈ ಹಿನ್ನಲೆ ಹಾಸ್ಟೇಲ್ ನಲ್ಲಿ ವಾಸವಾಗಿದ್ದರು. ಹಾಸ್ಟೆಲ್ ನಲ್ಲಿ ವಾಸವಾಗಿದ್ದ ನೀನಾ ಬಾತ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಹೆತ್ತವರಿಗೆ ಆರ್ಥಿಕವಾಗಿ ಹೊರೆಯಾಗುತ್ತಿದ್ದೆನೆ ಎಂದು ಬರೆದಿದ್ದಾಳೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಪಾಕ್ ಪರ ಘೋಷಣೆ: ಮೂವರು ಆರೋಪಿಗಳ ಬಂಧನ..! ಮುನಾವರ್, ಇಲ್ತಾಜ್ ಮತ್ತು ಶಫಿ ನಾಶಿಪುಡಿ ಪೊಲೀಸರ ವಶಕ್ಕೆ..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget   Ad Widget   Ad Widget   Ad Widget