ಕ್ರೈಂವೈರಲ್ ನ್ಯೂಸ್

ನಕ್ಸಲ್ ನಾಯಕನನ್ನು ಕೋರ್ಟ್ ಗೆ ಕರೆತಂದ ಪೊಲೀಸರು, ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಶಿವಮೊಗ್ಗ ನ್ಯಾಯಾಲಯಕ್ಕೆ ಪೊಲೀಸರು ಇಂದು(ಜ.31) ಹಾಜರು ಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಒಟ್ಟು ಐದು ಕೇಸುಗಳನ್ನು ಹೊಂದಿರುವ ನಕ್ಸಲ್ ನಾಯಕ ಕೃಷ್ಣಮೂರ್ತಿಯನ್ನು ಮಂಗಳವಾರ ರಾತ್ರಿ ಕೇರಳದಿಂದ ಶಿವಮೊಗ್ಗಕ್ಕೆ ಕರೆ ತಂದಿರುವ ಪೊಲೀಸರು ಇಂದು ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎನ್ನಲಾಗಿದೆ.

ತೀರ್ಥಹಳ್ಳಿಯ ಎರಡು ಕೇಸುಗಳು, ಆಗುಂಬೆಯ ಮೂರು ಕೇಸುಗಳ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ. ಇಂದು ಮೂರು ಕೇಸುಗಳ ವಿಚಾರಣೆ ನಡೆಯಲಿದೆ.
ನಕ್ಸಲ್ ಕೃಷ್ಣಮೂರ್ತಿಯನ್ನು 2021ರ ನವೆಂಬರ್ ನಲ್ಲಿ ಕೇರಳ ಪೊಲೀಸರು ಬಂಧಿಸಿದ್ದರು. ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ನ ಜೈಲಿನಲ್ಲಿ ಬಂಧಿಯಾಗಿರುವ ಕೃಷ್ಣಮೂರ್ತಿ ನಕ್ಸಲ್ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿಕೊಂಡಿದ್ದ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ನೆಮ್ಮಾರು ಸಮೀಪದ ಬುಕ್ಕಡಿಬೈಲ್ ನಿವಾಸಿಯಾಗಿದ್ದ ಕೃಷ್ಣಮೂರ್ತಿ ನಕ್ಸಲ್ ನಾಯಕ ಸಾಕೇತ್ ರಾಜನ್ ಬಳಿಕ ನಕ್ಸಲ್ ನಾಯಕತ್ವ ವಹಿಸಿಕೊಂಡಿದ್ದ ಎನ್ನಲಾಗಿದೆ.

https://newsnotout.com/2024/01/sarasswathi-at-school-rule/

Related posts

ಜೀಪು ನಿಲ್ಲಿಸುತ್ತಿದ್ದಂತೆ ಚಾಲಕ ಹೃದಯಾಘಾತಕ್ಕೆ ಬಲಿ

ಐಸಿಸ್ ಮಾದರಿಯಲ್ಲಿ ನೇಹಾ ಕುತ್ತಿಗೆಗೆ ಚಾಕು ಹಾಕಿ ಕೊಲೆ, ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತ್ತಾಲಿಕ್ ಗಂಭೀರ ಆರೋಪ

ಸೌಜನ್ಯ ಸಾವಿನ ನ್ಯಾಯಕ್ಕಾಗಿ ಸುಳ್ಯದಲ್ಲೂ ತಲೆಯೆತ್ತಿದ ಬ್ಯಾನರ್ , ತೆರೆಮರೆಯಲ್ಲಿ ನಡೆಯುತ್ತಿದೆಯಾ ಹೋರಾಟದ ತಯಾರಿ?