ಭಕ್ತಿಭಾವ

ದೇವಸ್ಥಾನದಲ್ಲಿ ಅಂಗಿ-ಬನಿಯನ್ ಕಳಚಿಡುವ ಸಂಪ್ರದಾಯದ ವಿರುದ್ಧ ದೂರು

534

ನ್ಯೂಸ್ ನಾಟೌಟ್ : ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೂ ಮುನ್ನ ಪುರುಷರು ಅಂಗಿ-ಬನಿಯನ್ ಕಳಚಿಡುವ ಸಂಪ್ರದಾಯವನ್ನು ನೋಡಿದ್ದೇವೆ. ಆದರೆ ಇದೀಗ ಈ ಸಂಪ್ರದಾಯದ ವಿರುದ್ಧ ಬಲವಾದ ಆಕ್ಷೇಪ ವ್ಯಕ್ತವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಡುಪಿಯ ಕೊಲ್ಲೂರು ದೇವಸ್ಥಾನದ ವಿರುದ್ಧ ದೂರು ಸಲ್ಲಿಕೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಂಗಳೂರಿನ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದಿಂದ ಧಾರ್ಮಿಕ ದತ್ತಿ‌ ಇಲಾಖೆಗೆ ಲಿಖಿತ ದೂರು ನೀಡಲಾಗಿದೆ. ಅಂಗಿ-ಬನಿಯನ್ ಕಳಚಿಟ್ಟು ದೇವರ ದರ್ಶನ ಪಡೆಯುವ ಪದ್ಧತಿ ಸರಿಯಲ್ಲ. ಸರ್ಕಾರದ ಆದೇಶ ಮತ್ತು ಹಿಂದೂ ಸಂಪ್ರದಾಯದಲ್ಲಿ ಈ ಪದ್ಧತಿ ಇಲ್ಲ‌. ಈ ಆಚರಣೆ ಮೂಲಕ ಭಕ್ತರಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ. ಚರ್ಮ ರೋಗವಿದ್ದವರು ಅಂಗಿ ಕಳಚಿ ಸಾಗುವುದರಿಂದ ಬೇರೆಯವರಿಗೆ ಹರಡೋ ಸಾಧ್ಯತೆ ಇದೆ.‌ ಅಂಗವೈಕಲ್ಯ ಇದ್ದವರಿಗೆ ಬಟ್ಟೆ ಕಳಚಿ ದರ್ಶನ ಪಡೆಯುವುದು ನೋವು ತರಬಹುದು. ಇದು ಭಾರತದ ಸಾಂವಿಧಾನಿಕ ಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆ. ತಕ್ಷಣ ದೇವಸ್ಥಾನದಲ್ಲಿ ಅಳವಡಿಸಲಾದ ಬಟ್ಟೆ ಕಳಚುವ ಸೂಚನಾ ಬೋರ್ಡ್ ತೆರವಿಗೆ ಮನವಿ ಮಾಡುವ ಮೂಲಕ ಕುಕ್ಕೆ ಮತ್ತು ಕೊಲ್ಲೂರಿನ ಸಂಪ್ರದಾಯದ ವಿರುದ್ದ ಅಪಸ್ವರ ಎತ್ತಲಾಗಿದೆ. ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಈ ನಿಯಮ ತಕ್ಷಣ ದಿಂದ ತೆಗೆದು ಹಾಕುವಂತೆ ಒತ್ತಾಯಿಸಿದ್ದು, ಧಾರ್ಮಿಕ ದತ್ತಿ ಇಲಾಖೆ ಗಮನ ಹರಿಸದೇ ಇದ್ದರೆ ಮುಂದಿನ ದಿನಗಳಲ್ಲಿ ನ್ಯಾಯಾಲಯದ ಮೂಲಕ ಕಾನೂನು ಹೋರಾಟ ನಡೆಸಲು ಚಿಂತನೆ ನಡೆಸಿದೆ.

See also  ಸುಳ್ಯ: ಆ.11ಕ್ಕೆ ಶ್ರೀ ಗುರು ರಾಯರ 354ನೇ ಆರಾಧನಾ ಮಹೋತ್ಸವ, ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget