Latestಕ್ರೈಂರಾಜ್ಯವೈರಲ್ ನ್ಯೂಸ್

ದೇವಸ್ಥಾನದ ಬಾಗಿಲಲ್ಲಿ ವಾಮಾಚಾರಕ್ಕೆ ಬಳಸಿದ್ದ ಬೊಂಬೆ, ಕುಂಕುಮ, ತಾಮ್ರದ ತಗಡು ಪತ್ತೆ..! ಸುಟ್ಟು ಕರಕಲಾದ ದೇಗುಲದ ಬಾಗಿಲು..!

298
Pc Cr: Public Tv
Spread the love

ನ್ಯೂಸ್ ನಾಟೌಟ್: ವಾಮಾಚಾರ ಮಾಡಿ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ ಬಾಗಿಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಕೆಂಪಮ್ಮ ದೇವಿ ದೇವಾಲಯಕ್ಕೆ ಮಂಗಳವಾರ(ಮಾ.11) ಸಂಜೆ ಯಾರೂ ಇಲ್ಲದ್ದನ್ನು ಗಮನಿಸಿ ಪಶ್ಚಿಮದ ಬಾಗಿಲಿಗೆ ವಾಮಾಚಾರ ಮಾಡಿದ್ದಾರೆ. ನಂತರ ವಾಮಾಚಾರದ ವಸ್ತುಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಸಂಪೂರ್ಣ ಬಾಗಿಲಿಗೆ ಬೆಂಕಿ ಆವರಿಸಿದೆ ಎನ್ನಲಾಗಿದೆ. ಇಂದು(ಮಾ.12) ಬೆಳಗ್ಗೆ ಪೂಜಾ ಕೈಂಕರ್ಯಗಳನ್ನು ನಡೆಸಲು ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಸುಮಲತಾ ಅಂಬರೀಶ್ ಅನ್ನು ಅನ್‌ ಫಾಲೋ ಮಾಡಿದ ನಟ ದರ್ಶನ್..! ಕುತೂಹಲ ಮೂಡಿಸಿದ ಸುಮಲತಾ ಪೋಸ್ಟ್..!

ಘಟನೆಯಿಂದ ದೇವಸ್ಥಾನದ ಬಾಗಿಲು ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳದಲ್ಲಿ ವಾಮಾಚಾರಕ್ಕೆ ಬಳಸಿದ್ದ ಬೊಂಬೆ, ಕುಂಕುಮ, ತಾಮ್ರದ ತಗಡು ವಸ್ತುಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

See also  ಶೋಷಿತರ ಸಮಾವೇಶದಲ್ಲಿ ಕ್ವಿಂಟಾಲ್‌ಗಟ್ಟಲೇ ಚಿಕನ್ ಬಿರಿಯಾನಿ ಮಣ್ಣುಪಾಲು..! ಆಯೋಜಕರ ವಿರುದ್ಧ ಜನಾಕ್ರೋಶ
  Ad Widget   Ad Widget   Ad Widget   Ad Widget