ಕರಾವಳಿ

ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ವಿವಿ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟದ ಒಪ್ಪಿಗೆ

ನ್ಯೂಸ್ ನಾಟೌಟ್ : ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾನಿಲಯ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಬಹು ದೊಡ್ಡ ಕನಸು ಈಡೇರಿದಂತಾಗಿದೆ.

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯಲ್ಲಿ ಹದಿನೈದು ಜನರ ಸದಸ್ಯರುಗಳನ್ನೊಳಗೊಂಡ ಸಮಿತಿಯನ್ನು ರಚಿಸಿ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಸರಕಾರಕ್ಕೆ ಬೇಕಾಗಿದ್ದ ಎಲ್ಲ ದಾಖಲೆಗಳನ್ನು ರೇಣುಕಾ ಪ್ರಸಾದ್ ಹಾಗೂ ತಂಡ ನೀಡಿತ್ತು. ಇದನ್ನು ಪರಿಶೀಲಿಸಿದ ಸರಕಾರ ಇದೀಗ ಗ್ರೀನ್ ಸಿಗ್ನಲ್ ನೀಡಿದೆ. ವಿಶ್ವವಿದ್ಯಾಲಯ ಸ್ಥಾಪನಾ ಸಮಿತಿಯಲ್ಲಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ವಿಭಾಗದ ಮುಖ್ಯಸ್ಥರು ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯ ಡಾ.ಉಜ್ವಲ್ ಯು.ಜೆ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಒಂದು ಪ್ರಸ್ತಾವನೆಯನ್ನು ಸಂಘದ ಅಧ್ಯಕ್ಷ ಬಾಲಕೃಷ್ಣ ಸಿ.ಎನ್, ಪ್ರಧಾನ ಕಾರ್ಯದರ್ಶಿ ಕೋನಪ್ಪ ರೆಡ್ಡಿ, ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ ರವರ ಸಹಿಯೊಂದಿಗೆ ಸರಕಾರಕ್ಕೆ ಸಲ್ಲಿಸಲಾಗಿತ್ತು. ಸರಕಾರದ ಕೊಡುಗೆಗೆ ಹಾಗೂ ಸಹಕರಿಸಿದ ಪ್ರತಿಯೊಬ್ಬರಿಗೂ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿಯವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Related posts

ಅತ್ತೆಗೆ 4 ಸಾವಿರ, ಸೊಸೆಗೆ ಎರಡೂವರೆ ಸಾವಿರ ಗ್ಯಾರಂಟಿ..!, ಕಾಂಗ್ರೆಸ್ ನಿಂದ ಮತ್ತೊಂದು ಉಚಿತ ಘೋಷಣೆ

ಅಪಾರ್ಟ್ ಮೆಂಟ್ ನ ಬಾಲ್ಕನಿಯಿಂದ ಬಿದ್ದು ಮಹಿಳೆ ಮೃತ್ಯು,ಆಕಸ್ಮಿಕವೋ?ಆತ್ಮಹತ್ಯೆಯೋ?

ಖ್ಯಾತ ಯಕ್ಷಗಾನ ಭಾಗವತ ಆತ್ಮಹತ್ಯೆ