ಕರಾವಳಿಕ್ರೈಂ

ಭತ್ತದ ಗದ್ದೆಗೆ ತೆರಳುವಾಗ ಕಾಲು ಜಾರಿ ನದಿಗೆ ಬಿದ್ದ ವೃದ್ದೆ,ಧಾರಾಕಾರ ಮಳೆಗೆ ಜಿಲ್ಲೆಯಲ್ಲಿ 2ನೇ ಬಲಿ

320

ನ್ಯೂಸ್ ನಾಟೌಟ್ : ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು,ಭೀಕರ ಮಳೆಯಿಂದ ವೃದ್ದೆಯೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.ರಣ ಮಳೆ ಜಿಲ್ಲೆಯಲ್ಲಿ ಎರಡನೇ ಬಲಿ ಪಡೆದುಕೊಂಡಿದೆ.

ಭತ್ತದ ಗದ್ದೆಗೆ ತೆರಳುವಾಗ ಕಾಲು ಜಾರಿ ವೃದ್ದೆಯೊಬ್ಬರು ನದಿಗೆ ಬಿದ್ದಿದ್ದಾರೆ ಎನ್ನುವ ಎಂಬ ಶಂಕೆ ವ್ಯಕ್ತವಾಗಿದ್ದು,ರಭಸವಾಗಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ.ಹೇಮಾವತಿ ನದಿಯಲ್ಲಿ ತೇಲುತ್ತಿದ್ದ ವೃದ್ಧೆಯ ಶವ ಪತ್ತೆಯಾಗಿದೆ.ಈ ವೇಳೆ ನದಿ ದಡದಲ್ಲಿ ಸಿಲುಕಿದ್ದ ಶವವನ್ನು ಸ್ಥಳೀಯರು ಮೇಲಕ್ಕೆತ್ತಿದರು.

ಮೂಡಿಗೆರೆ ತಾಲೂಕಿನ ಮೃತರನ್ನು ದಾರದಹಳ್ಳಿ ಗ್ರಾಮದ ದೇವಮ್ಮ(61 ) ಎಂದು ಗುರುತಿಸಲಾಗಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ಸ್ಥಳಕ್ಕೆ ಮೂಡಿಗೆರೆ ಪೊಲೀಸರು ಧಾವಿಸಿ,ಪರಿಶೀಲನೆ ನಡೆಸಿದರು.ಆದರೆ ಇದು ಆತ್ಮಹತ್ಯೆಯೋ ಆಕಸ್ಮಿಕವೋ ಎನ್ನುವ ಬಗ್ಗೆ ಪೊಲೀಸ್ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

See also  ತಿರುಪತಿಯಲ್ಲಿ ಬಾಂಬ್ ಬೆದರಿಕೆ! ರಾತ್ರಿ 10 ಗಂಟೆಯಿಂದ 2 ಗಂಟೆಯವರೆಗೆ ಪೊಲೀಸರಿಂದ ತೀವ್ರ ಶೋಧ ಕಾರ್ಯ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget