ದೇಶ-ವಿದೇಶ

ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆಗೆ ಸಿದ್ಧತೆ, ಡಿ.16ರಂದು ಲೋಕಸಭೆಯಲ್ಲಿ ಮಂಡನೆ

214

ನ್ಯೂಸ್ ನಾಟೌಟ್: ‘ಒಂದು ದೇಶ ಒಂದು ಚುನಾವಣೆ’ಗೆ ಸಂಬಂಧಿಸಿದ ಎರಡು ಮಸೂದೆಗಳನ್ನು ಡಿ.16ರಂದು ಲೋಕಸಭೆಯಲ್ಲಿ ಮಂಡಿಸಲು ಸರ್ಕಾರ ತಯಾರಿ ನಡೆಸಿದೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಸೂದೆಗೆ ಅನುಮೋದನೆ ದೊರಕಿತ್ತು. ಉದ್ದೇಶಿತ ಸಂವಿಧಾನ ತಿದ್ದುಪಡಿ ಮಸೂದೆಯಲ್ಲಿ ಲೋಕಸಭೆ ಹಾಗೂ ರಾಜ್ಯಗಳ ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಸ್ತಾಪ ಇದೆ. ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದಲ್ಲಿ ರಚಿಸಿದ್ದ ಉನ್ನತ ಮಟ್ಟದ ಸಮಿತಿಯು ಒಂದು ದೇಶ ಒಂದು ಚುನಾವಣೆಗೆಯ ಬಗ್ಗೆ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಿತ್ತು. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ‘ಸವಿಂಧಾನ (129ನೇ ತಿದ್ದುಪಡಿ) ಮಸೂದೆ’ ಹಾಗೂ ‘ಕೇಂದ್ರಾಡಳಿತ ಪ್ರದೇಶಗಳ ಕಾನೂನು (ತಿದ್ದುಪಡಿ) ಮಸೂದೆ’ಯನ್ನು ಕೆಳಮನೆಯಲ್ಲಿ ಮಂಡನೆ ಮಾಡಲಿದ್ದಾರೆ.

See also  ಆನ್‌ ಲೈನ್‌ ಬುಕ್ಕಿಂಗ್‌ ಮಾಡಿದವರಿಗೆ ಮಾತ್ರ ಶಬರಿಮಲೆ ಪ್ರವೇಶ..! ದಿನಕ್ಕೆ 80,000 ಭಕ್ತರಿಗೆ ದರ್ಶನಕ್ಕೆ ಅವಕಾಶ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget