ಬೆಂಗಳೂರು: ಭಾರತದಲ್ಲಿ ಈ ಹಿಂದೆ ತನ್ನ ನಾರ್ಡ್ ಸರಣಿಯ ಸ್ಮಾರ್ಟ್ಫೋನ್ಗಳನ್ನು (Smartphone) ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ಒನ್ಪ್ಲಸ್ ಕಂಪನಿ ಇದೀಗ ಮತ್ತೆ ಹೊಸ ಒನ್ ಪ್ಲಸ್ ನಾರ್ಡ್ ಸಿಇ 2 5G (OnePlus Nord CE 2 5G) ಸ್ಮಾರ್ಟ್ ಫೋನ್ನೊಂದಿಗೆ ಬಂದಿದೆ. ಇದು ಕಳೆದ ವರ್ಷ ಬಿಡುಗಡೆ ಆಗಿ ಸಾಕಷ್ಟು ಬೇಡಿಕೆ ಸೃಷ್ಟಿಸಿದ್ದ ಒನ್ ಪ್ಲಸ್ ನಾರ್ಡ್ CE 5G ಯ ಉತ್ತರಾಧಿಕಾರಿಯಾಗಿದೆ. ಈ ಹಿಂದಿನ ಒನ್ ಪ್ಲಸ್ ನಾರ್ಡ್ ಸ್ಮಾರ್ಟ್ ಫೋನ್ ಗಳಿಗಿಂತ ಇದು ಎರಡು ಪಟ್ಟು ವೇಗವಾಗಿರುತ್ತದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿದ್ದು ಆಕರ್ಷಕ ಕ್ಯಾಮೆರಾ (Camera), ಅತ್ಯುತ್ತಮ ಬ್ಯಾಟರಿ ಪವರ್, ಮೀಡಿಯಾ ಟೆಕ್ ಡೈಮೆನ್ಸಿಟಿ ಪ್ರೊಸೆಸರ್ ಬಲವನ್ನು ಹೊಂದಿದೆ. ಕೇವಲ 32-ನಿಮಿಷಗಳಲ್ಲಿ ಶೇ. 100% ಚಾರ್ಜ್ ಆಗುವ ಈ ಫೋನ್ ಇಂದಿನಿಂದ ಖರೀದಿಗೆ ಲಭ್ಯವಿದೆ.
ಭಾರತದಲ್ಲಿ ಒನ್ ಪ್ಲಸ್ ನಾರ್ಡ್ CE 2 5G ಸ್ಮಾರ್ಟ್ ಫೋನ್ ಸದ್ಯಕ್ಕೆ ಎರಡು ಮಾದರಿಯಲ್ಲಿ ಬಿಡುಗಡೆ ಆಗಿದೆ. ಇದರ 6GB RAM ಮತ್ತು 128GB ಸ್ಟೋರೇಜ್ ಬೇಸ್ ಮಾಡೆಲ್ ಗೆ 23,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ 24,999 ರೂ. ಆಗಿದೆ. ಈ ಸ್ಮಾರ್ಟ್ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಕಂಪನಿಯ ಅಧಿಕೃತ ವೆಬ್ ಸೈಟ್, ಚಿಲ್ಲರೆ ಅಂಗಡಿಗಳಲ್ಲಿ ಇಂದಿನಿಂದ ಖರೀದಿಗೆ ಸಿಗುತ್ತಿದೆ. ಈ ಸ್ಮಾರ್ಟ್ಫೋನ್ ಹಲವು ಆಕರ್ಷಕ ಆಫರ್ ಮತ್ತು ಡಿಸ್ಕೌಂಟ್ ಅನ್ನು ಘೋಷಿಸಿದೆ. ನೀವು ICICI ಬ್ಯಾಂಕ್ ಕಾರ್ಡ್ ಹೊಂದಿದ್ದರೆ, 1500 ರೂ. ತನಕ ಹೆಚ್ಚುವರಿ ರಿಯಾಯಿತಿ ಮತ್ತು 3 ತಿಂಗಳವರೆಗೆ ನೋ ಕಾಸ್ಟ್ ಇಎಂಐ ಆಯ್ಕೆಯನ್ನು ಪಡೆಯಬಹುದಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ, ನೀವು ನಿಮ್ಮ ಡಿವೈಸ್ ಗಳನ್ನು ಎಕ್ಸ್ ಚೇಂಜ್ ಆಫರ್ ನಲ್ಲಿ 3000 ರೂ. ವರೆಗೆ ವಿನಿಮಯ ಮಾಡಿಕೊಳ್ಳಬಹುದು. ಈ ಕೊಡುಗೆಯು ಒನ್ ಪ್ಲಸ್.ಇನ್ , ಒನ್ ಪ್ಲಸ್ ಸ್ಟೋರ್ ಆಪ್, ಅಮೆಜಾನ್.ಇನ್, ಒನ್ ಪ್ಲಸ್ ಎಕ್ಸಿಪಿರಿಯೆನ್ಸ್ ಸ್ಟೋರ್ ಗಳು ಮತ್ತು ಅಧಿಕೃತ ಪಾಲುದಾರ ಮಳಿಗೆಗಳಲ್ಲಿ ಲಭ್ಯವಿದೆ.