Latestದೇಶ-ವಿದೇಶವೈರಲ್ ನ್ಯೂಸ್

ಸಿಂಧೂರ ಅಳಿಸಿದವರಿಗೆ ಮಹಿಳಾ ಅಧಿಕಾರಿಗಳಿಂದಲೇ ಉತ್ತರ..! ಕರ್ನಲ್ ಸೋಫಿಯಾ, ವಿಂಗ್ ಕಮಾಂಡರ್ ವ್ಯೋಮಿಕಾ ಪತ್ರಿಕಾಗೋಷ್ಠಿ

781

ನ್ಯೂಸ್ ನಾಟೌಟ್: ಪಹಲ್ಗಾಮ್ ನಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಇಂದು(ಮೇ.7) ಸೂರ್ಯೋದಯಕ್ಕೂ ಮುನ್ನವೇ ಪಾಕ್‌ ನ ಉಗ್ರ ತಾಣಗಳನ್ನು ಭಾರತೀಯ ವಾಯುಪಡೆ ಧ್ವಂಸ ಮಾಡಿದೆ. ಘಟನೆ ಬಳಿಕ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಜೊತೆ ಸಶಸ್ತ್ರ ಪಡೆಗಳ ಇಬ್ಬರು ಹಿರಿಯ ಮಹಿಳಾ ಅಧಿಕಾರಿಗಳಾದ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರು ಆಪರೇಷನ್‌ ಸಿಂಧೂರದ ಬಗ್ಗೆ ಮಾಹಿತಿ ನೀಡಿದ್ದಾರೆ.

ಭಾರತ ವಿದೇಶಾಂಗ ಸಚಿವಾಲಯ ನಡೆಸಿದ ಸುದ್ದಿಗೋಷ್ಠಿಯಲ್ಲಿ, ಆಪರೇಷನ್‌ ಸಿಂಧೂರದ (Operation Sindoor) ಕುರಿತು ಮಹಿಳಾ ಅಧಿಕಾರಿಗಳಿಂದಲೇ ಮಾಹಿತಿ ಕೊಡಿಸಲಾಯಿತು. ಏಕೆಂದರೆ ಪಹಲ್ಗಾಮ್‌ ದಾಳಿಯಲ್ಲಿ 26 ಮಹಿಳೆಯರ ಸಿಂಧೂರ ಅಳಿಸಲಾಗಿತ್ತು, ಇದಕ್ಕೆ ಪ್ರತ್ಯುತ್ತರ ನೀಡಿದ ಭಾರತ ಮಹಿಳಾ ಅಧಿಕಾರಿಗಳಿಂದಲೇ ದಾಳಿಯ ವಿವರ ಕೊಡಿಸಿದೆ.

ವಿಂಗ್‌ ಕಮಾಂಡರ್‌ ವ್ಯೂಮಿಕಾ ಸಿಂಗ್‌ 2004ರ ಡಿ.18ರಲ್ಲಿ ಭಾರತೀಯ ವಾಯುಪಡೆಗೆ (IAF) ನಿಯೋಜನೆಗೊಂಡ ವ್ಯೂಮಿಕಾ ಸಿಂಗ್‌ ಅವರು ಪ್ರಸ್ತುತ ಅತ್ಯುತ್ತಮ ವಿಂಗ್‌ ಕಮಾಂಡರ್‌ಗಳಲ್ಲಿ ಒಬ್ಬರಾಗಿದ್ದಾರೆ. ಚೀತಾ, ಚೇತಕ್‌ನಂತಹ ಯುದ್ಧ ಹೆಲಿಕಾಪ್ಟರ್‌ಗಳನ್ನು ಹಾರಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಇನ್ನು ಕರ್ನಲ್ ಸೋಫಿಯಾ ಖುರೇಷಿ (Colonel Sophia Qureshi) ಪ್ರಸ್ತುತ ಭಾರತೀಯ ಸೇನೆಯ ಸಿಗ್ನಲ್ಸ್ ದಳದ ಅಧಿಕಾರಿಯಾಗಿದ್ದಾರೆ. 2016 ರಲ್ಲಿ ಬಹುರಾಷ್ಟ್ರೀಯ ಮಿಲಿಟರಿ ವ್ಯಾಯಾಮದಲ್ಲಿ ಭಾರತೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಮಹಿಳಾ ಅಧಿಕಾರಿಯಾಗಿ ಇತಿಹಾಸ ನಿರ್ಮಿಸಿದ್ದರು.

‘ಅಭಿ ಪಿಕ್ಚರ್ ಬಾಕಿ ಹೈ’ ಎಂದ ಮಾಜಿ ಸೇನಾ ಮುಖ್ಯಸ್ಥ..! ಮನೋಜ್ ನರವನೆ ಯುದ್ಧದ ಸುಳಿವು ಕೊಟ್ಟರಾ..?

See also  ಇಸ್ರೇಲ್​-ಇರಾನ್​ ಯುದ್ಧದಿಂದ ಭಾರತದಲ್ಲಿ ದುಬಾರಿಯಾಗಲಿದೆ ಕಚ್ಚಾ ತೈಲ..! ಹಲವು ಉತ್ಪನ್ನಗಳ ಬೆಲೆಯ ಮೇಲೂ ಪರಿಣಾಮ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget