Latestದೇಶ-ವಿದೇಶರಾಜಕೀಯರಾಜ್ಯ

ಆಪರೇಷನ್ ಸಿಂಧೂರ: ಶುಕ್ರವಾರ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಸಚಿವ ಜಮೀರ್ ಆದೇಶ..! ಇಲ್ಲಿದೆ ಸಂಪೂರ್ಣ ಮಾಹಿತಿ

1.3k

ನ್ಯೂಸ್ ನಾಟೌಟ್: ಆಪರೇಷನ್ ಸಿಂಧೂರ ಕಾರ್ಯಚರಣೆ ಹಿನ್ನೆಲೆಯಲ್ಲಿ ಕರ್ನಾಟಕದ ಮುಜರಾಯಿ ಇಲಾಖಾ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಆಪರೇಷನ್ ಸಿಂಧೂರದ ಭಾಗವಾಗಿ ಎಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲು ಸೂಚನೆ ನೀಡಿದ್ದಾರೆ. ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲು ಧಾರ್ಮಿಕ ‌ದತ್ತಿ‌ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ವಕ್ಫ್ & ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಸಂದೇಶ ರವಾನಿಸಿದ್ದಾರೆ.

ಆಪರೇಷನ್ ಸಿಂಧೂರ: ಶುಕ್ರವಾರ ಎಲ್ಲಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಜಮೀರ್ ಸಂದೇಶ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ದೇಶದ ಮೂರು ಸಶಸ್ತ್ರ ಪಡೆಗಳ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ರಾಜ್ಯಾದ್ಯಂತ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ(ಮೇ. 09) ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ವಕ್ಫ್ ಬೋರ್ಡ್ ಸಿಇಒಗೆ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.

ಪಹಲ್ಗಾಮ್ ​ನಲ್ಲಿ ಉಗ್ರರ ದಾಳಿ ಹಿನ್ನೆಲೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿ ದೇಶ ರಕ್ಷಣೆಯಲ್ಲಿ ತೊಡಗಿರುವ ಭಾರತದ ಸೈನಿಕರ ಶ್ರೇಯಸ್ಸು ಮತ್ತು ಶಕ್ತಿ ತುಂಬಲು ವಕ್ಫ್ ಬೋರ್ಡ್ ವ್ಯಾಪ್ತಿಯ ಮಸೀದಿಗಳು ಸೇರಿ ಎಲ್ಲಾ ಮಸೀದಿಗಳಲ್ಲಿ ನಾಳೆ ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ತಿಳಿಸಲಾಗಿದೆ.

ರಾಜ್ಯದ ಮುಜುರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳಲ್ಲಿ ಭಾರತೀಯ ಸೇನೆ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಸುತ್ತೋಲೆ ಹೊರಬಿದ್ದ ಬೆನ್ನಲ್ಲೇ ಮಸ್ಲಿಮರಿಗೂ ಸಹ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲು ಹೇಳಬೇಕೆಂಬ ಕೂಗು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಇಂತಹದೊಂದು ಸೂಚನೆ ನೀಡಿದ್ದಾರೆ.

ಪಾಕಿಸ್ತಾನ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿಗೆ 13 ಭಾರತೀಯ ನಾಗರಿಕರು ಸಾವು..! ನೂರಾರು ಗಡಿ ನಿವಾಸಿಗಳು ಭೂಗತ ಬಂಕರ್‌ ಗಳಲ್ಲಿ ವಾಸ..!

 

See also  ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: ಸಂಸದರ ಕಚೇರಿ ಬಾಗಿಲ ಬಳಿ ಸಿಕ್ಕ ಪತ್ರದಲ್ಲೇನಿತ್ತು..? ಚುನಾವಣಾ ಫಲಿತಾಂಶಕ್ಕೂ ಮೊದಲೂ ಶುಭಾಶಯ ಕೋರಿದ್ದೇಕೆ ಆತ..?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget