ಸುಳ್ಯ

ಸುಳ್ಯ : ನೆಹರು ಮೆಮೊರಿಯಲ್ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

ನ್ಯೂಸ್ ನಾಟೌಟ್ : ಸುಳ್ಯದ ನೆಹರು ಮೆಮೊರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಅಭಿವಿನ್ಯಾಸ ಕಾರ್ಯಕ್ರಮ ಶನಿವಾರ (ಸೆ. 23) ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪ್ರಾಂಶುಪಾಲ ಪ್ರೊ. ರುದ್ರಕುಮಾರ್ ಎಂ.ಎಂ. ಅಧ್ಯಕ್ಷತೆ ವಹಿಸಿ ಕಾರ್ಯಕ್ರಮದ ಕುರಿತು ಮಾರ್ಗದರ್ಶನ ನೀಡಿದರು. ಬಳಿಕ ಎನ್.ಎಸ್.ಎಸ್‌.ನ ಕುರಿತು ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಎರಡರ ಯೋಜನಾಧಿಕಾರಿ ಸಂಜೀವ ಕೆ. ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ರಾಷ್ಟ್ರೀಯ ಸೇವಾ ಯೋಜನಾ ಘಟಕಾಧಿಕಾರಿ ಚಿತ್ರಲೇಖಾ ಪ್ರಾಸ್ತಾವಿಕ ಮಾತನಾಡಿದರು. ವಿಜ್ಞಾನ ವಿಭಾಗದ ಮನಸ್ವಿತಾ ಸ್ವಾಗತಿಸಿ, ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಗಾನ ವಂದಿಸಿದರು. ದ್ವಿತೀಯ ವಿಜ್ಞಾನ ವಿಭಾಗದ ಶಿಲ್ಪ ಕಾರ್ಯಕ್ರಮ ನಿರೂಪಿಸಿದರು.

Related posts

ನರ್ಸರಿಯಿಂದ ಕದ್ದು ಗಿಡಗಳನ್ನು ಕೊಂಡೊಯ್ಯುತ್ತಿದ್ದಾಗ ಕಾರ್ ಪಲ್ಟಿ,ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಸುಳ್ಯ:ವ್ಯಕ್ತಿಯೊಬ್ಬರ ಶವ ಕೆರೆಯಲ್ಲಿ ಪತ್ತೆ,ಆಕಸ್ಮಿಕವಾಗಿ ಕಾಲು ಜಾರಿ ಮೃತಪಟ್ಟಿರುವ ಶಂಕೆ

ಅಡ್ಕಾರು: ಕೂಲಿ ಕಾರ್ಮಿಕರ ಮೇಲೆ ಎರಗಿದ ಕಾರು ಪ್ರಕರಣ, ಕಣ್ಣೆದುರೇ ಸಂಭವಿಸಿದ ಭೀಕರ ಅಪಘಾತ ಹೇಗಿತ್ತು..? ಸಾವನ್ನೇ ಗೆದ್ದ ವ್ಯಕ್ತಿ ಹೇಳಿದ್ದೇನು..?