Latestಕ್ರೈಂದೇಶ-ವಿದೇಶ

ಪಹಲ್ಗಾಮ್ ದಾಳಿಯ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಪತ್ತೆ, ಅರೆಸ್ಟ್‌..! ಬಂಧಿತರಿಂದ ರಹಸ್ಯ ಮಾಹಿತಿ ಬಹಿರಂಗ..!

613

ನ್ಯೂಸ್ ನಾಟೌಟ್ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪ್ರವಾಸಿಗರ ಮೇಲೆ ದಾಳಿ (Pahalgam Attack) ನಡೆಸಿದ್ದ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರನ್ನು ಎನ್‌ಐಎ (NIA) ಅಧಿಕಾರಿಗಳು ಹಲವು ದಿನಗಳ ಬಳಿಕ ಪತ್ತೆ ಮಾಡಿ ಈಗ ಬಂಧಿಸಿದ್ದಾರೆ.

ಬಂಧಿತರನ್ನು ಪರ್ವೈಜ್ ಅಹ್ಮದ್ ಜೋಥರ್ ಮತ್ತು ಬಶೀರ್ ಅಹ್ಮದ್ ಜೋಥರ್ ಎಂದು ಗುರುತಿಸಲಾಗಿದೆ. ಇಬ್ಬರು ಪಹಲ್ಗಾಮ್ ನಿವಾಸಿಗಳಾಗಿದ್ದು, ನಿಷೇಧಿತ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (LeT) ಸಂಘಟನೆಗೆ ಸೇರಿದ ಮೂವರು ಉಗ್ರರಿಗೆ ಆಶ್ರಯ ನೀಡಿದ್ದರು.

ಇನ್ನೂ ತನಿಖೆ ವೇಳೆ, ಬಂಧಿತರು ದಾಳಿಕೋರರ ಗುರುತುಗಳನ್ನು ಬಹಿರಂಗಪಡಿಸಿದ್ದು, ಉಗ್ರರು ಪಾಕಿಸ್ತಾನಿ (Pakistan) ಪ್ರಜೆಗಳು ಎಂದು ದೃಢಪಟ್ಟಿದೆ. ಏಪ್ರಿಲ್ 22 ರಂದು, ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ 26 ಜನರನ್ನು ಹತ್ಯೆಗೈದಿದ್ದರು. ಇದಾದ ಬಳಿಕ ಭಾರತ ಹಾಗೂ ಪಾಕ್‌ ನಡುವೆ ಉದ್ವಿಗ್ನತೆ ಉಂಟಾಗಿತ್ತು. ಭಾರತೀಯ ಸೇನೆ, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಹಲವಾರು ಉಗ್ರರನ್ನು ಹೊಡೆದು ಹಾಕಿತ್ತು.

ಅಖಾಡಕ್ಕೆ ಅಮೆರಿಕಾ ಅಧಿಕೃತ ಎಂಟ್ರಿ..! ಇರಾನ್ 3 ಅಣುಸ್ಥಾವರಗಳ ಮೇಲೆ ವೈಮಾನಿಕ ಬಾಂಬ್ ದಾಳಿ..!

See also  ಕೋಮು ದ್ವೇಷಕ್ಕೆ ಬಲಿಯಾಗಿದ್ದ ಬೆಳ್ಳಾರೆಯ ಮಸೂದ್, ದೀಪಕ್ ರಾವ್, ಫಾಝಿಲ್ ಕುಟುಂಬಕ್ಕೆ ತಲಾ 25 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಸಿದ್ದು..!ಕೊನೆಗೂ ನೊಂದ ಕುಟುಂಬಕ್ಕೆ ಪರಿಹಾರದ ಆಸರೆ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget