Latest

ಪೆಹಲ್ಗಾಮ್ ದಾಳಿಯ ಸಂಪೂರ್ಣ ದೃಶ್ಯ ಸೆರೆ ಹಿಡಿದ ಫೋಟೋಗ್ರಾಫರ್..!ಉಗ್ರರಿಂದ ತಪ್ಪಿಸಿಕೊಂಡು ಮರವೇರಿ ದೃಶ್ಯವನ್ನು ಸೆರೆ ಹಿಡಿದ!

975

ನ್ಯೂಸ್ ನಾಟೌಟ್: ಕಾಶ್ಮೀರ ಪಹಲ್ಗಾಮ್ ನ ಬೈಸರನ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ದುರಂತಕ್ಕೆ ಸಂಬಂಧಿಸಿದಂತೆ ಕೆದಕಿದಷ್ಟು ಹಲವಾರು ವಿಚಾರಗಳು ಬಯಲಿಗೆ ಬರುತ್ತಲೇ ಇದೆ. ಹೌದು, ಇಡೀ ದೇಶವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದ ಆ ಒಂದು ಕೃತ್ಯಕ್ಕೆ ಸಂಬಂಧ ಪಟ್ಟ ಹಾಗೆ ಯಾವುದೇ ಸರಿಯಾದ ವಿಡಿಯೋ ತುಣುಕುಗಳು ಸಿಕ್ಕಿರಲಿಲ್ಲ. 26 ಪ್ರವಾಸಿಗರ ಹತ್ಯೆಗೈದ ಉಗ್ರರ ಕೃತ್ಯದ ಒಂದು ಸಣ್ಣ ಅಸ್ಪಷ್ಟ ವಿಡಿಯೋವೊಂದು ಸೆರೆಸಿಕ್ಕಿದ್ದು ಬಿಟ್ಟಿರೆ ಇದುವರೆಗೂ ಘಟನೆಯ ಕುರಿತು ಸ್ಪಷ್ಟ ಫೋಟೋ ಅಥವಾ ವಿಡಿಯೋ ಎಲ್ಲೂ ಕಂಡುಬಂದಿರಲಿಲ್ಲ. ಆದರೆ ಇದೀಗ ಸ್ಥಳೀಯ ಫೋಟೋಗ್ರಾಫರ್ ಒಬ್ಬ ಇಡೀ ಘಟನೆಯನ್ನು ತನ್ನ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾನೆ ಎಂಬ ವಿಷಯ ಬೆಳಕಿಗೆ ಬಂದಿದೆ.

ಘಟನೆ ನಡೆದಾಗ ಸ್ಥಳೀಯರ ಫೋಟೋ ಮತ್ತು ವಿಡಿಯೋಗಳನ್ನು ಈ ಫೋಟೋಗ್ರಾಫರ್ ಸೆರೆಹಿಡಿಯುತ್ತಿದ್ದ ಎನ್ನಲಾಗಿದ್ದು, ಈ ವೇಳೆ ಉಗ್ರರು ಏಕಾಏಕಿ ದಾಳಿ ನಡೆಸಿದ್ದಾರೆ. ಈ ವೇಳೆ ಗಾಬರಿಗೊಂಡ ಆತ ಓಡಿ ಹೋಗಿ ಸಮೀಪದ ಮರವೊಂದನ್ನು ಹತ್ತಿ ಉಗ್ರರಿಗೆ ಕಾಣದಂತೆ ಕುಳಿತಿದ್ದಾನೆ. ಅಲ್ಲಿಂದಲೇ ದಾಳಿಯ ಎಲ್ಲಾ ದೃಶ್ಯಗಳನ್ನು ಸೆರೆಹಿಡಿದಿದ್ದಾನೆ. ಈ ವಿಡಿಯೋ ಇಡೀ ಪ್ರಕರಣದ ಮೇಲೆ ಬೆಳಕು ಚೆಲ್ಲಿದೆ ಮತ್ತು ಉಗ್ರರ ಪತ್ತೆಗೆ ತನಿಖಾ ಸಂಸ್ಥೆಗಳಿಗೆ ಅತ್ಯಂತ ನಿಖರ ಸಾಕ್ಷ್ಯವಾಗಿ ಹೊರಹೊಮ್ಮಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಇದು, ಉಗ್ರದಾಳಿಯ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ)ದ ಪಾಲಿಗೆ ಪ್ರಮುಖ ಸಾಕ್ಷಿಯಾಗಿದೆ. ವೀಡಿಯೋಗ್ರಾಫರ್ ನನ್ನು ತನಿಖೆಗೆ ಒಳಪಡಿಸಿದ ಎನ್‌ಐಎ ತಂಡ, ಉಗ್ರರನ್ನು ಗುರುತಿಸಲು ವೀಡಿಯೋವನ್ನು ಪರಿಶೀಲಿಸುತ್ತಿದೆ. ತನಿಖೆ ನಡೆಯುತ್ತಿರುವ ಕಾರಣದಿಂದ ಈ ವಿಡಿಯೋವನ್ನು ಬಹಿರಂಗಪಡಿಸಿಲ್ಲ ಎನ್ನಲಾಗಿದೆ.

26 ಮಂದಿಯನ್ನು ಬಲಿಪಡೆದ ಪಹಲ್ಗಾಂ ಉಗ್ರ ದಾಳಿಯ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನ್ನ ತೆಕ್ಕೆಗೆ ತೆಗದುಕೊಂಡಿದೆ.ಈ ಕುರಿತು ಭಾನುವಾರ ಹೇಳಿಕೆ ನೀಡಿರುವ ಎನ್‌ಐಎ, ‘ಈಗಾಗಲೇ ನಾವು ತನಿಖೆಯನ್ನು ಆರಂಭಿಸಿದ್ದೇವೆ. ಕಳೆದ ಮಂಗಳವಾರ ಬೈಸರನ್ ನಲ್ಲಿ ಘಟನೆ ನಡೆದ ಹೊತ್ತಿನಲ್ಲಿದ್ದ ಅಲ್ಲಿ ಇದ್ದ ವ್ಯಕ್ತಿಗಳಿಂದ ಸಣ್ಣಸಣ್ಣ ಮಾಹಿತಿಯನ್ನು ಕಲೆ ಹಾಕುವ ಯತ್ನ ಮಾಡುತ್ತಿದ್ದೇವೆ. ಈ ಮೂಲಕ ದಾಳಿಕೋರರ ಪತ್ತೆಗೆ ಕ್ರಮ ಕೈಗೊಂಡಿದ್ದೇವೆ’ ಎಂದು ಹೇಳಿದೆ.

See also  ಕಾಮಿಡಿ ಕಿಲಾಡಿ ವಿಜೇತ ನಟ ಹಠಾತ್ ವಿಧಿವಶ, ಮೌನವಾಯಿತು ನಟನಾ ರಂಗ
  Ad Widget   Ad Widget   Ad Widget   Ad Widget