Latestಕ್ರೈಂದೇಶ-ವಿದೇಶವೈರಲ್ ನ್ಯೂಸ್

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ನೌಕಾಪಡೆ ಅಧಿಕಾರಿ ಬಲಿ..! 5 ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ಲೆಫ್ಟಿನೆಂಟ್..!

748

ನ್ಯೂಸ್‌ ನಾಟೌಟ್‌: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹರಿಯಾಣದ ಕರ್ನಾಲ್‌ ಪಡೆಯ 26 ವರ್ಷದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ದುರಂತ ಸಾವನ್ನಪ್ಪಿದ್ದಾರೆ. ನರ್ವಾಲ್ ಇತ್ತೀಚೆಗೆ ವಿವಾಹವಾಗಿದ್ದು ರಜೆಗಾಗಿ ಕಾಶ್ಮೀರಕ್ಕೆ ತೆರಳಿದ್ದರು ಎನ್ನಲಾಗಿದೆ.

ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದ ವಿನಯ್ ಏಪ್ರಿಲ್ 16 ರಂದು ವಿವಾಹವಾಗಿದ್ದರು. ನಂತರ ಅಲ್ಪ ರಜೆಗಾಗಿ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ್ದರು ಎಂದು ರಕ್ಷಣಾ ಅಧಿಕಾರಿಗಳು ದೃಢಪಡಿಸಿದ್ದಾರೆ. ಅವರ ವಿವಾಹ ಆರತಕ್ಷತೆ ಏಪ್ರಿಲ್ 19 ರಂದು ನಡೆಯಿತು. ಮೂಲಗಳ ಪ್ರಕಾರ ನವ ದಂಪತಿಗಳು ಪಹಲ್ಗಾಮ್‌ ನಲ್ಲಿ ಹನಿಮೂನ್‌ ಗೆ ತೆರಳಿದ್ದರು ಎನ್ನಲಾಗಿದೆ.

ನರ್ವಾಲ್ ಕೇವಲ ಎರಡು ವರ್ಷಗಳ ಹಿಂದೆ ನೌಕಾಪಡೆಗೆ ಸೇರಿದ್ದರು ಮತ್ತು ಕೊಚ್ಚಿಯಲ್ಲಿ ನಿಯೋಜನೆಗೊಂಡಿದ್ದರು. 5 ದಿನಗಳ ಹಿಂದೆ ವಿವಾಹವಾಗಿದ್ದರು. ಎಲ್ಲರೂ ಸಂತೋಷವಾಗಿದ್ದರು. ಅವರನ್ನು ಭಯೋತ್ಪಾದಕರು ಕೊಂದಿದ್ದಾರೆ, ಅವರು ಸ್ಥಳದಲ್ಲೇ ನಿಧನರಾದರು ಎಂಬ ಮಾಹಿತಿ ನಮಗೆ ಬಂದಿದೆ ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ.

ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಈ ಘಟನೆಯು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಲವಾರು ರಾಜಕೀಯ ನಾಯಕರು ದಾಳಿಯನ್ನು ಖಂಡಿಸಿದ್ದಾರೆ.  

ಲಷ್ಕರ್-ಎ-ತೈಬಾದ ಉಪ ಮುಖ್ಯಸ್ಥ ಕಾಶ್ಮೀರದ ದಾಳಿಯ ಮಾಸ್ಟರ್‌ ಮೈಂಡ್‌..! ಪ್ರವಾಸ ಅರ್ಧದಲ್ಲಿ ಮೊಟಕುಗೊಳಿಸಿ ಸೌದಿಯಿಂದ ಬಂದ ಮೋದಿ ವಿಮಾನ ನಿಲ್ದಾಣದಲ್ಲೇ ತುರ್ತು ಸಭೆ..!

ಕಾಶ್ಮೀರದಲ್ಲಿಉಗ್ರರ ದಾಳಿ: ಹೆಲ್ಪ್‌ ಲೈನ್ ಸಂಖ್ಯೆಗಳನ್ನು ಬಿಡುಗಡೆ ಮಾಡಿದ ಸರ್ಕಾರ, ಕನ್ನಡಿಗರ ನೆರವಿಗೆ ತೆರಳಿದ ಸಚಿವ ಸಂತೋಷ್‌ ಲಾಡ್

See also  ಅರಂಬೂರು ಬಳಿ ಕಾರು ಬೆಂಕಿಗಾಹುತಿ..! ಶಾರ್ಟ್ ಸರ್ಕ್ಯೂಟ್ ಶಂಕೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget