Latestಕ್ರೈಂದೇಶ-ವಿದೇಶರಾಜಕೀಯವೈರಲ್ ನ್ಯೂಸ್

ಪಹಲ್ಗಾಮ್‌ ನಲ್ಲಿ ಪ್ರವಾಸಿಗರ ಹತ್ಯೆಯನ್ನು ಖಂಡಿಸಿದ ವಿಶ್ವಸಂಸ್ಥೆ, ಸಂತ್ರಸ್ತ ಕುಟುಂಬಗಳ ಸದಸ್ಯರನ್ನು ಭೇಟಿ ಮಾಡಿದ ಗೃಹ ಸಚಿವ ಅಮಿತ್ ಶಾ

990

ನ್ಯೂಸ್‌ ನಾಟೌಟ್‌: ಜಮ್ಮುಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಶಸ್ತ್ರಸಜ್ಜಿತ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರವಾಗಿ ಖಂಡಿಸಿದ್ದಾರೆ. ಯಾವುದೇ ಪರಿಸ್ಥಿತಿಯಲ್ಲೂ ನಾಗರಿಕರ ವಿರುದ್ಧದ ದಾಳಿ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ʼಎಪ್ರಿಲ್ 22ರಂದು ಜಮ್ಮುಕಾಶ್ಮೀರದಲ್ಲಿ ಕನಿಷ್ಠ 26 ಜನರು ಮೃತಪಟ್ಟ ಸಶಸ್ತ್ರ ದಾಳಿಯನ್ನು ಪ್ರಧಾನ ಕಾರ್ಯದರ್ಶಿಗಳು ಬಲವಾಗಿ ಖಂಡಿಸುತ್ತಾರೆʼ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಪರವಾಗಿ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಿನ್ನೆ (ಎ.22) ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಇದರ ಬೆನ್ನಿಗೇ, ಶ್ರೀನಗರಕ್ಕೆ ಧಾವಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂತ್ರಸ್ತ ಕುಟುಂಬಗಳ ಸದಸ್ಯರನ್ನು ಭೇಟಿ ಮಾಡಿ, ಅವರಿಗೆ ಸಾಂತ್ವನ ಹೇಳಿದರು.

ಭಯೋತ್ಪಾದಕ ಗುಂಪಾದ ʼದಿ ರೆಸಿಸ್ಟೆನ್ಸ್ ಫ್ರಂಟ್ʼ ನ ಭಯೋತ್ಪಾದಕರು ಪ್ರವಾಸಿಗರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು. ಈ ಭಯೋತ್ಪಾದಕ ದಾಳಿಯಲ್ಲಿ ಓರ್ವ ವಿದೇಶಿ ಪ್ರಜೆ ಸೇರಿದಂತೆ ಒಟ್ಟು 27 ಮಂದಿ ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸುದ್ದಿ ತಿಳಿಯುತ್ತಿದ್ದಂತೆಯೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆಯೇ ಶ್ರೀನಗರಕ್ಕೆ ದೌಡಾಯಿಸಿ, ಭದ್ರತಾ ಪಡೆಗಳೊಂದಿಗೆ ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದರು. ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಕೂಡಾ ಈ ಭಯೋತ್ಪಾದಕ ದಾಳಿಯ ಕುರಿತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ತ್ರಿಪಾಠಿ ಸೇರಿದಂತೆ ಭದ್ರತಾ ಪಡೆಗಳ ಮುಖ್ಯಸ್ಥರಿಂದ ಮಾಹಿತಿ ಪಡೆದಿದ್ದಾರೆ. ಮುಂದಿನ ನಡೆಯ ಬಗ್ಗೆ ತುರ್ತು ಸಭೆಗಳು ನಡೆಯುತ್ತಿವೆ. 

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ನೌಕಾಪಡೆ ಅಧಿಕಾರಿ ಬಲಿ..! 5 ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ಲೆಫ್ಟಿನೆಂಟ್..!

See also  ಮೊದಲ ರಾತ್ರಿಯೇ ಗಂಡನ ಜೀವಕ್ಕೆ ಗಂಡಾಂತರ! ಸೀಲಿಂಗ್ ಫ್ಯಾನ್ ಬಿದ್ದು ಮದುಮಗನ ಸ್ಥಿತಿ ಗಂಭೀರ!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget