Latestದೇಶ-ವಿದೇಶರಾಜಕೀಯವೈರಲ್ ನ್ಯೂಸ್

ಪಹಲ್ಗಾಮ್ ಉಗ್ರ ದಾಳಿ ಬಗ್ಗೆ ಇಂದು(ಎ.24)ಸರ್ವಪಕ್ಷ ಸಭೆ ಕರೆದ ಪ್ರಧಾನಿ ಮೋದಿ, ಇಲ್ಲಿದೆ ಸಂಪೂರ್ಣ ಮಾಹಿತಿ

578

ನ್ಯೂಸ್ ನಾಟೌಟ್: ಜಮ್ಮು ಕಾಶ್ಮೀರದ ಅನಂತ್ ​ನಾಗ್​ ಜಿಲ್ಲೆಯಲ್ಲಿರುವ ಪಹಲ್ಗಾಮ್ ​ನಲ್ಲಿ ನಡೆದ ಉಗ್ರ ದಾಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇಂದು(ಎ.24) ಸರ್ವಪಕ್ಷ ಸಭೆ ಕರೆದಿದೆ.

ಸಂಜೆ ವೇಳೆಗೆ ಸಭೆ ನಡೆಯುವ ಸಾಧ್ಯತೆ ಇದ್ದು, ಈ ಮಹತ್ವದ ಸಭೆಯ ಅಧ್ಯಕ್ಷತೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸುವ ಸಾಧ್ಯತೆ ಇದೆ. ಪಹಲ್ಗಾಮ್ ದಾಳಿಗೆ ಸಂಬಂಧಿಸಿದ ಪ್ರಮುಖ ವಿಷಯಗಳು, ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಈ ಸಭೆಯಲ್ಲಿ ಚರ್ಚಿಸಬಹುದು ಎಂದು ಹೇಳಲಾಗುತ್ತಿದೆ.

ಮಂಗಳವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯಿಂದ ಇಡೀ ದೇಶ ದುಃಖಿತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಭಯೋತ್ಪಾದನೆಯನ್ನು ಹತ್ತಿಕ್ಕಲು ಮತ್ತು ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಕೇಂದ್ರ ಸರ್ಕಾರ ನಿರಂತರವಾಗಿ ತನ್ನ ಕಾರ್ಯತಂತ್ರವನ್ನು ರೂಪಿಸುತ್ತಿದೆ.

ಭಯೋತ್ಪಾದಕ ದಾಳಿಯ ವಿರುದ್ಧ ಕ್ರಮ ಕೈಗೊಳ್ಳಲು ಬುಧವಾರ ಪ್ರಧಾನಿ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ಸೇರಿತು. ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ದಾಳಿಯಲ್ಲಿ ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸಾವನ್ನಪ್ಪಿದ್ದಾರೆ. ಇತರ ಹಲವರು ಗಾಯಗೊಂಡರು.

ಗುರುವಾರ ಸಂಜೆ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಕೇಂದ್ರವು ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಮಾಹಿತಿ ನೀಡಲಿದ್ದು, ಅವರ ಅಭಿಪ್ರಾಯಗಳನ್ನು ಕೇಳಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ನಾಯಕರಿಗೆ ಮಾಹಿತಿ ನೀಡುವ ನಿರೀಕ್ಷೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪಾಕ್ ಗೆ ಇದರ ಜೊತೆ ರಾಜತಾಂತ್ರಿಕ ಉತ್ತರ ನೀಡಿದ್ದು,1960 ರ ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು ಮತ್ತು ಅಟ್ಟಾರಿ ಭೂ-ಸಾರಿಗೆ ಪೋಸ್ಟ್ ಅನ್ನು ತಕ್ಷಣವೇ ಮುಚ್ಚುವುದು ಸೇರಿದಂತೆ ಹಲವಾರು ಕ್ರಮಗಳನ್ನು ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಕುರಿತ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಕೇಂದ್ರದ ಜತೆ ನಾವಿದ್ದೇವೆ, ಉಗ್ರರನ್ನು ಸಂಪೂರ್ಣ ಮಟ್ಟ ಹಾಕಿ ಎಂದ ಸಿಎಂ, ಉಗ್ರ ದಾಳಿಯಲ್ಲಿ ಮೃತಪಟ್ಟವರ ಪಾರ್ಥಿವ ಶರೀರದ​ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

ಭಾರತ 5G ಯಲ್ಲಿರುವಾಗ ಚೀನಾದಲ್ಲಿ 10G ಬ್ರಾಡ್‌ ಬ್ಯಾಂಡ್ ನೆಟ್‌ ವರ್ಕ್ ಗೆ ಚಾಲನೆ, 20 ಜಿಬಿ ಗಾತ್ರದ 4k ಫೈಲ್ ಕೇವಲ 20 ಸೆಕೆಂಡ್ ನಲ್ಲಿ ಡೌನ್ ಲೋಡ್..!

See also  ವಿದ್ಯಾರ್ಥಿನಿಯರ ಹಾಸ್ಟೆಲ್‌ ನ ಬಾತ್‌ ರೂಮ್‌ ನಲ್ಲಿ ರಹಸ್ಯ ಕ್ಯಾಮೆರಾ ಪತ್ತೆ..? ವಿದ್ಯಾರ್ಥಿನಿಯರಿಗೆ ಬೆದರಿಕೆ ಕರೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget