Latestಕ್ರೈಂದೇಶ-ವಿದೇಶರಾಜಕೀಯರಾಜ್ಯ

ನಿಮ್ಮ ರಾಜ್ಯಗಳಲ್ಲಿರುವ ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಿ ಎಂದ ಗೃಹ ಸಚಿವ..! ಮುಖ್ಯಮಂತ್ರಿಗಳಿಗೆ ಅಮಿತ್ ಶಾ ಸೂಚನೆ

563

ನ್ಯೂಸ್ ನಾಟೌಟ್: ಪಹಲ್ಗಾಮ್ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ತಕ್ಕ ಶಿಕ್ಷೆ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಈ ವಿಷಯದಲ್ಲಿ ರಾಜ್ಯಗಳು ಸಮನ್ವಯ ಸಾಧಿಸಿ ಸಹಕರಿಸುವಂತೆ ಕೇಳಿಕೊಂಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದು, ಆಯಾ ರಾಜ್ಯಗಳಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅವರು ಪಾಕಿಸ್ತಾನಕ್ಕೆ ಶೀಘ್ರ ಮರಳುವಂತೆ ಸೂಚಿಸಲು ಕೇಳಿಕೊಳ್ಳುತ್ತಿದ್ದಾರೆ.

ಬಹುತೇಕ ಪ್ರವಾಸಿಗರು ಸೇರಿದಂತೆ 26 ಮಂದಿಯನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಉಭಯ ದೇಶಗಳ ನಡುವಿನ ಉದ್ವಿಗ್ನತೆ ಹೆಚ್ಚಾದ ಕಾರಣ, ಇದೇ ಏಪ್ರಿಲ್ 27 ರಿಂದ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ ವೀಸಾಗಳನ್ನು ರದ್ದುಗೊಳಿಸುವುದಾಗಿ ಭಾರತ ಘೋಷಿಸಿತ್ತು. ಅದರ ಜೊತೆಗೆ ಪಾಕಿಸ್ತಾನದಲ್ಲಿ ವಾಸಿಸುವ ಭಾರತೀಯ ಪ್ರಜೆಗಳು ಆದಷ್ಟು ಬೇಗನೆ ತವರುದೇಶಕ್ಕೆ ಮರಳುವಂತೆ ಸಲಹೆ ನೀಡಲಾಗಿದೆ.

ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಛತ್ತೀಸ್‌ ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, ಪಹಲ್ಗಾಮ್‌ ನಲ್ಲಿ ಹೆಚ್ಚಾಗಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಿರಾಯುಧ ಅಮಾಯಕ ನಾಗರಿಕರ ಮೇಲೆ ದಾಳಿ ಮಾಡಿದ್ದಾರೆ. ಭಾರತ ಸರ್ಕಾರ ಈ ಬಗ್ಗೆ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಅಲ್ಪಾವಧಿಯ ವೀಸಾ ಹೊಂದಿರುವವರ ವೀಸಾಗಳನ್ನು ರದ್ದುಗೊಳಿಸಬೇಕೆಂದು ನಮಗೆ ಕೇಂದ್ರ ಗೃಹ ಇಲಾಖೆ ನಿರ್ದೇಶನ ನೀಡಿದೆ ಎಂದಿದ್ದಾರೆ.

ಇಸ್ರೋ ಮಾಜಿ ಅಧ್ಯಕ್ಷ ಬೆಂಗಳೂರಿನಲ್ಲಿ ನಿಧನ..! ರಾಜ್ಯಸಭೆಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದ ಕಸ್ತೂರಿರಂಗನ್

‘ಜವನೆರೆ ಕಲ’ ಮಂಗಳೂರು ಆಕಾಶವಾಣಿ ಫೋನ್ ಇನ್ ಕಾರ್ಯಕ್ರಮ, ಸಾಮಾಜಿಕ ಜಾಲತಾಣದ ಬಗ್ಗೆ ಮನಮುಟ್ಟುವ ಕಾರ್ಯಕ್ರಮ ನೀಡಿದ ನ್ಯೂಸ್ ನಾಟೌಟ್’ ಸಿಬ್ಬಂದಿ ದಿನೇಶ್ ಎಂ

ಮಂಗಳೂರು: ಪಹಲ್ಗಾಮ್ ದಾಳಿಯನ್ನು ಸಮರ್ಥಿಸಿಕೊಂಡು ಪೋಸ್ಟ್ ಹಾಕಿದವನ ವಿರುದ್ಧ ಪ್ರಕರಣ ದಾಖಲು..! ಆರೋಪಿಗಾಗಿ ಹುಡುಕಾಟ

See also  ಹಿಂದೂ ವಿದ್ಯಾರ್ಥಿನಿಯರಿಗೂ ಹಿಜಾಬ್...ವಿವಾದ; ಶಿಕ್ಷಣಾಧಿಕಾರಿ ಮೇಲೆ ಇಂಕ್ ಎರಚಿದ ಬಿಜೆಪಿ ಕಾರ್ಯಕರ್ತರು!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget